ಮೈಸೂರು

ಸೂರಜ್‌ ವಿರುದ್ಧ ಕ್ರಮಕ್ಕೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ: ಜಿಟಿ ದೇವೇಗೌಡ

ಮೈಸೂರು: ಯುವಕನೋರ್ವನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಎಂಎಲ್‌ಸಿ ಸೂರಜ್‌ ರೇವಣ್ಣ ವಿರುದ್ಧದ ಕ್ರಮಕ್ಕೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಭಾನುವಾರ (ಜೂನ್‌. 23) ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು, ಈ ಪ್ರಕರಣದ ಸಂಬಂಧ ನನಗೆ ಯಾವುದೇ ಮಾಹಿತಿಯಿಲ್ಲ. ಸೂರಜ್‌ ಬಂಧನದ ವಿಚಾರವೂ ನನಗೆ ಮಾಧ್ಯಮದಿಂದಲೇ ತಿಳಿಯಿತು. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆಯಾಗಲಿದೆ. ಪಕ್ಷ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಅವರು ತಿಳಿಸಿದರು.

ನನ್ನ ಮಗನಾಗಲಿ, ನನ್ನ ಸಂಬಂಧಿಗಳೇ ಇರಲಿ, ಪಕ್ಷದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ಪರವಾಗಿ ಎಂದೂ ನಿಲ್ಲುವುದಿಲ್ಲ. ನಾನು ತಪ್ಪು ಮಾಡಿದವರ ಪರ ಎಂದೂ ನಿಲ್ಲುವುದಿಲ್ಲ ಎಂದರು.

ಸೂರಜ್‌ ರೇವಣ್ಣ ಬಂಧನದಿಂದ ಪಕ್ಷಕ್ಕೆ ಮುಜುಗರ ತಂದಿದೆಯಾ ಎಂಬ ಪ್ರಶ್ನೆಗೆ, ರಾಜ್ಯದಲ್ಲಿ ಯಾರೋ ಒಬ್ಬರು ತಪ್ಪು ಮಾಡಿದರೇ ಅದಕ್ಕೆ ಆರೂವರೆ ಕೋಟಿ ಜನರು ಕಾರಣವೇ? ಇಲ್ಲಾ ತಾನೆ? ಎಂದು ಪ್ರತಿಕ್ರಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

7 mins ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

9 mins ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

11 mins ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

13 mins ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

15 mins ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

21 mins ago