Mysore
21
overcast clouds
Light
Dark

ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಜಿಟಿಡಿ ಆಗ್ರಹ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಸಿಬಿಐಗೆ ಈ ಪ್ರಕರಣವನ್ನು ವರ್ಗಾಯಿಸಬೇಕು ಎಂದು ಜೆಡಿಎಸ್‌ ಕೋರ್‌ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಮೈಸೂರಿನಲ್ಲಿಂದು (ಜುಲೈ. 11) ಆಗ್ರಹಿಸಿದ್ದಾರೆ.

ಗುರುವಾರ ಮೈಸೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಅವರಿಗೆ ಮುಡಾದಿಂದ 50:50 ಅನುಪಾತದಲ್ಲಿ ನಿವೇಶನಗಳನ್ನು ಹಂಚಿದ ಬಗ್ಗೆ ನಮ್ಮ ಪಸ್ತಾಪವಿಲ್ಲ. ಆದರೆ ಅಧಿಕಾರಿಗಳು ಸಮನಾಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕಿತ್ತು. ಆದರೆ ಇದು ಹಾಗಾಗಿಲ್ಲ ಎಂದು ದೂರಿದರು.

ಇನ್ನು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿಯ ಹೆಸರಲ್ಲಿ ಅಕ್ರಮವಾಗಿ ನಿವೇಶನ ಪಡೆದಿದ್ದೇ ಆದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜಿಟಿ ದೇವೇಗೌಡ ಕಿಡಿಕಾರಿದರು.