ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ನಮಗೆ ಗೆಲುವಾಗಲೇಬೇಕು. ಆ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ತೊಲಗಿಸಬೇಕು ಎಂದು ಜೆಡಿಎಸ್ ಕೋರ್‌ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ವಾಗ್ದಾಳಿ ನಡೆಸಿದರು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಮೈಸೂರು ಚಲೋ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇವಲ 14 ತಿಂಗಳ ಅಧಿಕಾರಾವಧಿಯಲ್ಲಿಯೇ ಕಾಂಗ್ರೆಸ್ ಸರ್ಕಾರ ಹಲವಾರು ಹಗರಣಗಳಲ್ಲಿ ಸಿಲುಕಿಕೊಂಡಿದೆ. ಈವರೆಗೆ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿಲ್ಲ. ಹಿಗಾಗಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈತ್ರಿ ಸರ್ಕಾರ ಪಾದಯಾತ್ರೆ ಹಮ್ಮಿಕೊಂಡಿತ್ತು. ಮುಡಾ ಪ್ರಕರಣದಲ್ಲಿ ನಮಗೆ ಗೆಲುವಾಗಬೇಕು ಆ ಮೂಲಕ ರಾಜ್ಯ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಕಿಡಿಕಾರಿದರು.