ಮೈಸೂರು

ಮುಡಾ ಹಗರಣದಲ್ಲಿ ಗೆಲುವಾಗಲೇಬೇಕು: ಜಿಟಿ ದೇವೇಗೌಡ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ನಮಗೆ ಗೆಲುವಾಗಲೇಬೇಕು. ಆ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ತೊಲಗಿಸಬೇಕು ಎಂದು ಜೆಡಿಎಸ್‌ ಕೋರ್‌ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ವಾಗ್ದಾಳಿ ನಡೆಸಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಮೈಸೂರು ಚಲೋ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇವಲ 14 ತಿಂಗಳ ಅಧಿಕಾರಾವಧಿಯಲ್ಲಿಯೇ ಕಾಂಗ್ರೆಸ್‌ ಸರ್ಕಾರ ಹಲವಾರು ಹಗರಣಗಳಲ್ಲಿ ಸಿಲುಕಿಕೊಂಡಿದೆ. ಈವರೆಗೆ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿಲ್ಲ. ಹಿಗಾಗಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೈತ್ರಿ ಸರ್ಕಾರ ಪಾದಯಾತ್ರೆ ಹಮ್ಮಿಕೊಂಡಿತ್ತು. ಮುಡಾ ಪ್ರಕರಣದಲ್ಲಿ ನಮಗೆ ಗೆಲುವಾಗಬೇಕು ಆ ಮೂಲಕ ರಾಜ್ಯ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಕಿಡಿಕಾರಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

27 mins ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

1 hour ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

1 hour ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

2 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

2 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

3 hours ago