Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಸಿದ್ದು ಪರ ಜಿಟಿಡಿ ಹೇಳಿಕೆ : ಜೆಡಿಎಸ್‌ ನಾಯಕರಿಂದ ಕ್ರಮಕ್ಕೆ ಆಗ್ರಹ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದರು. ಆದರೆ ಸಿಎಂ ಸಿದ್ದು ಪರ ಶಾಸಕ ಜಿ.ಟಿ.ದೇವೇಗೌಡ ಅವರು ಹೇಳಿಕೆ ನೀಡಿ ಜೆಡಿಎಸ್‌ ನಾಯಕರ ಅಸಮಾಧಾನಕ್ಕೆ ಗುರಿಯಾಗಿದ್ದರು. ಹೀಗಾಗಿ ಜಿಟಿಡಿ ವಿರುದ್ಧ ಸ್ವಪಕೀಯ ನಾಯಕರೇ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಸಿದ್ದರಾಮಯ್ಯ ರಾಜೀನಾಮೆಗೆ ಹೋರಾಟ ನಡೆಸುತ್ತಿದ್ದಾರೆ, ಆದರೆ, ಈ ಮಧ್ಯೆ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್‌ ದಾಖಲಾದರೆ ರಾಜೀನಾಮೆ ನೀಡಬೇಕಾ? ಹಾಗಾಂತ ಕಾನೂನು ಇದೆಯಾ? ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ರಾಜೀನಾಮೆ ಕೇಳಿದರೆ ಕೊಡುತ್ತಾರಾ? ಎಂದು ಪ್ರಶ್ನೆ ಮಾಡಿದ್ದರು.

ಜಿ.ಟಿ.ದೇವೇಗೌಡರ ಈ ಹೇಳಿಕೆಯಿಂದ ಎನ್‌ಡಿಎ ನಾಯಕರು ಮುಜುಗರಕ್ಕೆ ಒಳಗಾಗಿದ್ದು, ಈ ಹೇಳಿಕೆಯಿಂದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರು ಮುನಿಸಿಕೊಂಡಿದ್ದಾರೆ. ಅಲ್ಲದೇ ಜಿಟಿಡಿ ಅವರ ಬಗ್ಗೆ ಎಚ್.ಡಿ.ದೇವೇಗೌಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬುದು ಅವರ ಆಪ್ತರ ಮೂಲಗಳಿಂದ ತಿಳಿದು ಬಂದಿದೆ.

ಈ ಮಧ್ಯೆ ಜಿ.ಟಿ.ದೇವೇಗೌಡರ ಹೇಳಿಕೆಯಿಂದ ಪಕ್ಷಕ್ಕೆ ಸಾಕಷ್ಟು ಡ್ಯಾಮೇಜ್‌ ಆಗಿದ್ದು, ಮುಡಾ ಹೋರಾಟಕ್ಕೆ ಎನ್‌ಡಿಎ ಮೈತ್ರಿ ಒಕ್ಕೂಟಕ್ಕೆ ಹಿನ್ನಡೆಯಾಗಿದೆ. ಈ ಕಾರಣಕ್ಕೆ ಜಿ.ಟಿ.ದೇವೇಗೌಡ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್‌ನ ಹಾಲಿ ಮತ್ತು ಮಾಜಿ ಶಾಸಕರು ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಮನವಿ ಮಾಡಿದ್ದಾರೆ.

Tags: