ಮೈಸೂರು

ಉತ್ತಮ ಆಡಳಿತಕ್ಕೆ ಗ್ಯಾರಂಟಿ ಯೋಜನೆ ಮಾದರಿಯಾಗಿದೆ : ಡಾ. ಪುಷ್ಪ ಅಮರನಾಥ್

ನಂಜನಗೂಡು : ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಚುನಾವಣೆಯಲ್ಲಿ ಸ್ಪಷ್ಟ ಬಹುಮತದ ಬಳಿಕ ರಾಜ್ಯದ ಜನರಿಗೆ ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ನೀಡಿದ್ದೇವೆ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷೆ ಡಾ, ಪುಷ್ಪ ಅಮರನಾಥ್ ಹೇಳಿದರು.

ಹುಣ್ಣಿಮೆ ಹಿನ್ನೆಲೆಯಲ್ಲಿ ಮಂಗಳವಾರ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ದೇವಾಲಯಕ್ಕೆ ಕುಟುಂಬ ಸಮೇತ ಆಗಮಿಸಿ, ಶ್ರೀ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದು ಪಾರ್ವತಮ್ಮ, ಚಂಡಿಕೇಶ್ವರ, ಗಣಪತಿ, ಸುಬ್ರಮಣ್ಯ ಗ್ರಹಗಳಿಗೆ ಪ್ರದಕ್ಷಿಣೆ ಹಾಕಿ ದರ್ಶನ ಪಡೆದರು.

ಬಳಿಕ ಮಾತನಾಡಿದ ಅವರು, ಮುಂದಿನ ರಾಜಕೀಯ ಬಗ್ಗೆ ನಾನು ಯೋಚನೆ ಮಾಡಿಲ್ಲ. ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷರನ್ನಾಗಿ ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ. ನಂಜುಂಡೇಶ್ವರ ಸ್ವಾಮಿ ನಮ್ಮ ಮನೆದೇವರಾಗಿದ್ದು, ಸನ್ನಿಧಿಗೆ ಬಂದಿದ್ದೇನೆ. ಆದರೆ, ದೇವಾಲಯದ ಸನ್ನಿಧಿಯಲ್ಲಿ ರಾಜಕೀಯ ಮಾತನಾಡುವುದು ಸರಿಯಲ್ಲ. ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ನೀಡಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆ, ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಇಂದು ದೇವಸ್ಥಾನದಲ್ಲಿ ನೋಡಿದಾಗ ಹೆಚ್ಚಿನ ಸಂಖ್ಯೆಯಲ್ಲಿ ಉಚಿತವಾಗಿ ಮಹಿಳೆಯರು ಆಗಮಿಸಿ , ದೇವರ ದರ್ಶನವನ್ನ ಪಡೆಯುತ್ತಿರುವುದು ಸಂತಸದ ವಿಷಯವಾಗಿದೆ. ಗ್ಯಾರಂಟಿ ಯೋಜನೆಗಳು ಕೇವಲ ಮಹಿಳೆಯರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರ ಖಾತೆಗೆ ಹಣ ಬಂದರೆ ಕುಟುಂಬದ ನಿರ್ವಹಣೆಗೆ ಒತ್ತಡ ಕಡಿಮೆಯಾಗುತ್ತದೆ. ಮಹಿಳೆಯರು ಸ್ವಾವಲಂಬಿಯಾಗಿ ನಿಲ್ಲಲು ಸಹಕಾರಿಯಾಗಿದೆ ಎಂದರು.

ಇದನ್ನು ಓದಿ : ಚುನಾವಣೆ ರಾಜಕಾರಣದಿಂದ ಹಿಂದೆ ಸರಿದ ಗೀತಾ ಶಿವರಾಜ್‌ಕುಮಾರ್‌ ; ಕಾರಣವೇನು?

ಸಿ.ಎಂ ಸಿದ್ದರಾಮಯ್ಯರವರ ನೇತೃತ್ವದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಕೊಟ್ಟಿದ್ದೇವೆ ಇದರಿಂದ ಬಡ ಜನರಿಗೆ ಅನುಕೂಲವಾಗಿದೆ. ತಲಾ ಆದಾಯದಲ್ಲೂ ನಮ್ಮ ರಾಜ್ಯವು ಒಂದನೇ ಸ್ಥಾನದಲ್ಲಿದೆ. ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸಬೇಕು. ನಾವು ಜಾತಿ ಸಮೀಕ್ಷೆಯಿಂದ ಜಾತಿಗಳನ್ನು ಹೊಡೆಯುತ್ತಿಲ್ಲ ನಾವು ಸಮಾನತೆಯನ್ನು ತರಲು ಹೊರಟಿದ್ದೇವೆ. ಕೇಂದ್ರವು ಕೂಡ ಜಾತಿಗಣತಿ ನಡೆಸಲು ಮುಂದಾಗಿದೆ.‌ ಬಿಜೆಪಿಯವರಿಗೆ ಕೆಲಸವೇನು ಇಲ್ಲ ಟೀಕೆ ಮಾಡಿಕೊಂಡು ಕಾಲ ಕಳೆಯುತ್ತಿದ್ದಾರೆ ಟೀಕಿಸಿದರು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿರುವುದು ಖಂಡನೀಯ ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ನ್ಯಾಯಾಂಗ ವ್ಯವಸ್ಥೆ ಕೂಡಲೇ ವಕೀಲನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂಬರುವ ದಿನಗಳಲ್ಲಿ ಮಹಿಳಾ ಮೀಸಲು ಕ್ಷೇತ್ರವಾದರೆ ಚುನಾವಣೆಗೆ ಸ್ಪರ್ಧೆ ಮಾಡುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಯೋಗ ಮತ್ತು ಯೋಗ್ಯತೆ ಇರಬೇಕು. ಈ ಬಗ್ಗೆ ನಾನು ಯೋಚನೆ ಮಾಡಿಲ್ಲ. ಹಿರಿಯ ನಾಯಕರು ನನ್ನನ್ನು ಗುರುತಿಸಿ ಅವಕಾಶ ಕೊಟ್ಟರೆ ಚುನಾವಣೆಗೆ ಸ್ಪರ್ಧಿಸುವಾಗಿ ಪರೋಕ್ಷವಾಗಿ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಯೂಥ್ ಕಾಂಗ್ರೆಸ್ ಅಧ್ಯಕ್ಷ ಚಂದನ್ ಗೌಡ, ಗ್ರಾಮಾಂತರ ಯೂಥ್ ಅಧ್ಯಕ್ಷ ಕರಳಪುರ ವಿಜಯ್ ಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಜರಿದ್ದರು .

ಆಂದೋಲನ ಡೆಸ್ಕ್

Recent Posts

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

40 mins ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

51 mins ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

1 hour ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

1 hour ago

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

1 hour ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

2 hours ago