ಮೈಸೂರು: ದಶಕದಿಂದಲೂ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರಿಸಬೇಕು ಎಂದು ಆಗ್ರಹಿಸಿ ಮೈಸೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ಸೋಮವಾರ ಅಹೋರಾತ್ರಿ ಪ್ರತಿಭಟನೆ ನಡೆಸಿದರು.
ಇಲ್ಲಿನ ಕ್ರಾಫರ್ಡ್ ಭವನದ ಎದುರು ಜಮಾಯಿಸಿದ ಮೈಸೂರು ವಿವಿ ಅತಿಥಿ ಉಪನ್ಯಾಸಕರು, ಪ್ರತಿಭಟನಕಾರರು, ವಿಶ್ವವಿದ್ಯಾಲಯದ ಕುಲಪತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಂಘದ ಅಧ್ಯಕ್ಷ ಪಾಪಣ್ಣ ಮಾತನಾಡಿ, ‘ಹತ್ತಾರು ವರ್ಷದಿಂದ ಅರ್ಹತೆಯ ಆಧಾರದ ಮೇಲೆ ಕೆಲಸ ಮಾಡುತ್ತಿದ್ದೇವೆ. ಈಗಾಗಲೇ ಮೂರ್ನಾಲ್ಕು ಸಂದರ್ಶನ ನೀಡಿಯೇ ನೌಕರಿ ಮುಂದುವರಿಸಿದ್ದೇವೆ. ಈಗ ಮರು ಸಂದರ್ಶನ ಮಾಡಿ ಅವಮಾನಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
‘ನೆಟ್, ಕೆ–ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರು, ಪಿಎಚ್‌ಡಿ ಪದವಿ ಪಡೆದ 600ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿದ್ದು, ಎಲ್ಲರನ್ನೂ ಮುಂದುವರಿಸಬೇಕು. ಯಾರು ಸರಿಯಾಗಿ ಕೆಲಸ ಮಾಡುತ್ತಿಲ್ಲವೂ ಅವರನ್ನು ತೆಗೆದುಹಾಕಿ, ಅವರಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳುವಂತೆ ಸೂಚಿಸಲಿ. ಆದರೆ, ಎಲ್ಲರನ್ನೂ ಒಂದೇ ಎಂದು ಪರಿಗಣಿಸಿರುವುದು ಸರಿಯಲ್ಲ’ ಎಂದು ಕಿಡಿಕಾರಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ, ಉಪಾಧ್ಯಕ್ಷರಾದ ದಿನಮಣಿ, ರಾಘವೇಂದ್ರ, ಕಾರ್ಯದರ್ಶಿ ಹರ್ಷ, ಅತಿಥಿ ಉಪನ್ಯಾಸಕರಾದ ಡಾ. ಕೆ.ಪಿ ರಮೇಶ್ ಹಾಜರಿದ್ದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…