hc mahadevappa
ಮೈಸೂರು: ರಾಜ್ಯದಲ್ಲಿ ಯಾವ ಕುರ್ಚಿ ಖಾಲಿ ಇದೆಯೋ ಗೊತ್ತಿಲ್ಲ. ಸದ್ಯಕ್ಕಿರುವ ಸಿಎಂ ಕುರ್ಚಿ ಖಾಲಿ ಇಲ್ಲ, ಸಿಎಂ ಕುರ್ಚಿ ಭದ್ರವಾಗಿದೆ. ಅದರ ಮೇಲೆ ಕೂತಿರುವ ಸಿದ್ದರಾಮಯ್ಯನವರು ಭದ್ರವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.
ಬರುವ ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಸ್ಥಿರವಾಗಿದೆ. ಒಳ್ಳೆಯ ಆಡಳಿತ ನಡೆಸುತ್ತಿದ್ದಾರೆ ಎಂದು ಹೇಳಿದರು.
ಬಿಜೆಪಿಯವರು ಯಾವಾಗ ತಾನೇ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಾರೆ ಹೇಳಿ. ಅವರು ವಾಮ ಮಾರ್ಗದಿಂದಲೇ ಅಽಕಾರ ಹಿಡಿದಿದ್ದು, ಆಪರೇಷನ್ ಕಮಲದ ಮೂಲಕ ಅನೈತಿಕ ಮೈತ್ರಿ ಮಾಡಿ ಕೊಂಡು ಅಧಿಕಾರಕ್ಕೆ ಬಂದಿದ್ದರು. ನಮ್ಮ ಕಾಂಗ್ರೆಸ್ ಶಾಸಕರ ಮೇಲು ಅಂತಹ ಪ್ರಯತ್ನ ಮಾಡಿದರು. ನಮ್ಮಲ್ಲಿ ೧೩೬ ಸೀಟುಗಳನ್ನು ಗೆದ್ದು ಸ್ಪಷ್ಟ ಬಹುಮತ ಇರುವುದರಿಂದ ಅವರ ಪ್ರಯತ್ನ ಕೈಗೂಡಿಲ್ಲ. ಆದರೂ ಆಪರೇಷನ್ ಕಮಲಕ್ಕೆ ಪ್ರಯತ್ನ ಮಾಡಿದ್ದಾರೆ. ಅದು ನಡೆದಿಲ್ಲ ಅಷ್ಟೇ ಎಂದು ತಿರುಗೇಟು ನೀಡಿದರು.
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…
ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…