ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ಕಳೆದ ಮೂರು ದಿನಗಳಿಂದ ಅದ್ದೂರಿಯಾಗಿ 13ನೇ ಕುಂಭಮೇಳ ನಡೆಯುತ್ತಿದ್ದು, ಭಕ್ತರು ಸಾಗರೋಪಾದಿಯಲ್ಲಿ ಹರಿದು ಬಂದು ಪುಣ್ಯಸ್ನಾನ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದ ತೀರದಲ್ಲಿ ಇಂದು(ಫೆಬ್ರವರಿ.12) ಕುಂಭಮೇಳದಲ್ಲಿ ಭಾಗವಹಿಸಿದ ವೇಳೆ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಮೂರು ದಿನಗಳಿಂದ ಅದ್ದೂರಿಯಾಗಿ ತಿರುಮಕೂಡಲು ನರಸೀಪುರದಲ್ಲಿ ಕುಂಭಮೇಳ ನಡೆಯುತ್ತಿದೆ. ಹೀಗಾಗಿ ಭಕ್ತರು ಸಾಗರೋಪಾದಿಯಲ್ಲಿ ಹರಿದು ಬಂದು ಪುಣ್ಯಸ್ನಾನ ಮಾಡುತ್ತಿದ್ದಾರೆ. ಈ ಸ್ಥಳದಲ್ಲಿ ಪ್ರಥಮಬಾರಿಗೆ 1989ರಲ್ಲಿ ಕುಂಭಮೇಳ ನಡೆಯಿತು. ಅಂದಿನಿಂದ ಇಲ್ಲಿಯವರೆಗೂ ಪ್ರತಿ ಮೂರು ವರ್ಷಕ್ಕೊಮ್ಮೆ ಕುಂಭಮೇಳ ನಡೆಯುತ್ತದೆ. ಆದರೆ 2020-21ರ ಕೋವಿಡ್ ಸಂದರ್ಭದಲ್ಲಿ ಮಾತ್ರ ಕುಂಭಮೇಳ ನಡೆಯಲಿಲ್ಲ ಎಂದು ಹೇಳಿದರು.
ಈ ಕುಂಭಮೇಳ ಆಚರಣೆಗೆ ಸಿಎಂ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿ ಅಗತ್ಯವನ್ನು ನೀಡಿದ್ದು, ಜಿಲ್ಲಾಡಳಿತ ವ್ಯವಸ್ಥಿತವಾಗಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿದೆ. ನಮ್ಮ ದೇಶವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ. ಹಾಗಾಗಿ ಧಾರ್ಮಿಕ ಸಹಿಷ್ಣುತೆಯನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಧಾರ್ಮಿಕ ಆಚಾರ ವಿಚಾರಗಳ ಆಚರಣೆಗೆ ಮುಕ್ತವಾದ ಅವಕಾಶವನ್ನು ಸಂವಿಧಾನದಲ್ಲಿ ಕಲ್ಪಿಸಲಾಗಿದೆ. ಸಂವಿಧಾನ ಎಲ್ಲರ ಹಕ್ಕುಗಳನ್ನು ರಕ್ಷಣೆ ಮಾಡುತ್ತದೆ. ನಾವು ಭಾರತೀಯರು, ನಾವೆಲ್ಲರೂ ಒಂದೇ ನಮ್ಮಲ್ಲಿ ಮೇಲು ಕೀಳು ಭಾವನೆ ಇಲ್ಲ ಎಂಬ ಭಾವನೆಯನ್ನು ಪ್ರತಿಯೊಬ್ಬರೂ ಬೆಳಸಿಕೊಳ್ಳಬೇಕು ಎಂದರು.
ಇನ್ನೂ ನದಿಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿಯಾಗಿದ್ದು, ತಮ್ಮ ಚರಂಡಿ ಮತ್ತು ನಿವಾಸದ ತ್ಯಾಜ್ಯದ ನೀರನ್ನು ನದಿ ಕಾಲುವೆಗಳಿಗೆ ಹರಿಯಲು ಬಿಡಬಾರದು. ನದಿಗಳ ನೀರು ನಮ್ಮ ದೇಶದ ಸಂಪತ್ತಾಗಿದೆ. ಅದನ್ನು ಉಳಿಸಿ ಬೆಳಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…