ಎಚ್.ಡಿ.ಕೋಟೆ : ಹೆಜ್ಜೇನು ದಾಳಿಗೆ ಸಿಲುಕಿ ರೈತ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕೆ.ಎಡತೊರೆ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಪಾಪಣ್ಣ (79) ಎಂಬುವವರೇ ಹೆಜ್ಜೇನು ದಾಳಿಯಿಂದ ಮೃತಪಟ್ಟ ರೈತನಾಗಿದ್ದು, ಜಮೀನಲ್ಲಿ ಕೆಲಸ ಮಾಡುತ್ತಿದ್ದಾಗ ಹೆಜ್ಜೇನು ಹಠಾತ್ ದಾಳಿ ಮಾಡಿವೆ ಎನ್ನಲಾಗಿದೆ.
ಹೆಜ್ಜೇನು ದಾಳಿಯಿಂದ ಗಂಭೀರವಾಗಿ ಗಾಯಗೊಂಡ ರೈತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ರೈತ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಸಂಬಂಧ
ಎಚ್.ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





