accident (1)
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನ ಹೆರಿಗೆ ಗ್ರಾಮದ ಹಿರಿಯ ಮುಖಂಡ ವರಸಿಂಗೇಗೌಡ (70) ಸಾವಿಗೀಡಾದವರು.
ಭಾನುವಾರ ಮಧ್ಯಾಹ್ನ ವರಸಿಂಗೇಗೌಡ ಹೈರಿಗೆಯ ತಮ್ಮ ಮನೆಯಿಂದ ಬೈಕ್ ಮೂಲಕ ಮಾದಾಪುರ ಗ್ರಾಮಕ್ಕೆ ಹೋಗುತ್ತಿದ್ದಾಗ ಹೈರಿಗೆ ಗ್ರಾಮದ ನಿವಾಸಿಗಳಾದ ವೇಣು ದಂಪತಿ ತಮ್ಮ ಬೈಕಿನಲ್ಲಿ ಮಾದಾಪುರದಿಂದ ಹೈರಿಗೆ ಗ್ರಾಮಕ್ಕೆ ಬರುತ್ತಿದ್ದಾಗ ಪೆಟ್ರೋಲ್ ಬಂಕ್ ಬಳಿ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ವರಸಿಂಗೇಗೌಡರ ತಲೆ ಮತ್ತು ಕಾಲಿಗೆ ತೀವ್ರ ಪೆಟ್ಟಾಗಿದ್ದು, ಅವರನ್ನು ಕೂಡಲೇ ಗ್ರಾಮಸ್ಥರು, ಸಂಬಂಧಿಕರು ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಮೃತರಿಗೆ ಪತ್ನಿ ಜವರಮ್ಮ, ಪುತ್ರರಾದ ಶ್ರೀಧರ್, ಅನಿಲ್, ಪುತ್ರಿ ಅನುಪಮಾ ಇದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ಗ್ರಾಮದ ತೋಟದಲ್ಲಿ ನೆರವೇರಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…