ಹೆಚ್.ಡಿ.ಕೋಟೆ : ತಾಲ್ಲೂಕಿನ ಗಡಿ ಭಾಗದ ಗಂಡತ್ತೂರು ಗ್ರಾಮದಲ್ಲಿ ಸಾಲ ಬಾಧೆಯಿಂದ ಯುವ ರೈತ ವೆಂಕಟೇಶ್ (33) ನೇಣು ಬಿಗಿದುಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಎರಡು ಎಕರೆ ಜಮೀನಿನಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲು ಬೆಳೆಯಲು 4 ಲಕ್ಷ ರೂ. ಸಾಲ ಮಾಡಿದ್ದ ಇವರು, ಬೆಳೆಗಳು ಸಮರ್ಪಕವಾಗಿ ಬಾರದಿದ್ದರಿಂದ ಸಾಲ ತೀರಿಸಲು ಹೆದರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:-ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್ ಸಮಸ್ಯೆಗೆ ಶೀಘ್ರ ತೆರೆ : ಇಂಧನ ಸಚಿವ ಜಾರ್ಜ್
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನೆರವೇರಿತು. ಈ ಸಂಬಂಧ ಪ್ರಕರಣ ದಾಖಲಾಗಿದೆ.





