Mysore
15
broken clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಎಚ್.ಡಿ.ಕೋಟೆಯ ಸೆಂಟ್‌ ಜೋಸೆಫ್‌ ಸೆಂಟ್ರಲ್‌ ಸ್ಕೂಲ್‌ನಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಸೆಂಟ್‌ ಜೋಸೆಫ್‌ ಸೆಂಟ್ರಲ್‌ ಸ್ಕೂಲ್‌ನಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೆಂಟ್‌ ಮೇರಿಸ್‌ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರಾದ ಡಾ.ಜ್ಯೋತಿ ಅವರು, ಪೋಷಕರು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯ ಬಗ್ಗೆ ಗಮನ ಹರಿಸಬೇಕು. ಹಾಗೆಯೇ ಶೈಕ್ಷಣಿಕ ಬೆಳವಣಿಗೆಯ ಬಗ್ಗೆ ಶಿಕ್ಷಕರು ಕ್ರಮ ವಹಿಸುತ್ತಾರೆ. ಯಾಕೆಂದರೆ ನಾನು ಇತ್ತೀಚೆಗೆ ನಮ್ಮ ಆಸ್ಪತ್ರೆಯಲ್ಲಿ ಸಾಕಷ್ಟು ಮಕ್ಕಳನ್ನು ಗಮನಿಸುತ್ತಿದ್ದೇನೆ. ತುಂಬಾ ಮಕ್ಕಳು ಪೌಷ್ಠಿಕಾಂಶದ ಕೊರತೆಯಿಂದ ಬಳಲುತ್ತಿವೆ. ಇದಕ್ಕೆ ಮುಖ್ಯ ಕಾರಣ ನಾವು ದಿನನಿತ್ಯ ತಿನ್ನುವ ಆಹಾರ. ಈ ಆಹಾರ ಪದ್ದತಿಯನ್ನು ನಾವು ಸಮತೋಲನದ ಕ್ರಮದಲ್ಲಿ ಬದಲಾಯಿಸದಿದ್ದರೇ ಮಕ್ಕಳಿಗೆ ಅರೋಗ್ಯದಲ್ಲಿ ಏರುಪೇರು ಆಗುತ್ತಿದೆ. ಆದ್ದರಿಂದ ಪೋಷಕರು ಈ ವಿಷಯಗಳ ಮೇಲೆ ಕಾಳಜಿ ವಹಿಸಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಸುಮಾರು 300ಕ್ಕೂ ಹೆಚ್ಚು ಎಲ್‌ಕೆಜಿ, ಯುಕೆಜಿ ಮತ್ತು ಒಂದನೇ ತರಗತಿ ಮಕ್ಕಳು ತಮ್ಮ ತಮ್ಮ ತಾಯಂದಿರಿಂದ ತಟ್ಟೆಯಲ್ಲಿ ಅಕ್ಕಿ ತುಂಬಿಸಿ ಅದರಲ್ಲಿ ಅರಿಶಿನ ಕೊನೆಯಿಂದ ಅಮ್ಮ ಎಂದು ಬರೆಯುವ ಮೂಲಕ ಅಕ್ಷರಾಭ್ಯಾಸ ಮಾಡಿದರು.

 

Tags:
error: Content is protected !!