ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಸೆಂಟ್ ಜೋಸೆಫ್ ಸೆಂಟ್ರಲ್ ಸ್ಕೂಲ್‌ನಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸೆಂಟ್ ಮೇರಿಸ್ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರಾದ ಡಾ.ಜ್ಯೋತಿ ಅವರು, ಪೋಷಕರು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯ ಬಗ್ಗೆ ಗಮನ ಹರಿಸಬೇಕು. ಹಾಗೆಯೇ ಶೈಕ್ಷಣಿಕ ಬೆಳವಣಿಗೆಯ ಬಗ್ಗೆ ಶಿಕ್ಷಕರು ಕ್ರಮ ವಹಿಸುತ್ತಾರೆ. ಯಾಕೆಂದರೆ ನಾನು ಇತ್ತೀಚೆಗೆ ನಮ್ಮ ಆಸ್ಪತ್ರೆಯಲ್ಲಿ ಸಾಕಷ್ಟು ಮಕ್ಕಳನ್ನು ಗಮನಿಸುತ್ತಿದ್ದೇನೆ. ತುಂಬಾ ಮಕ್ಕಳು ಪೌಷ್ಠಿಕಾಂಶದ ಕೊರತೆಯಿಂದ ಬಳಲುತ್ತಿವೆ. ಇದಕ್ಕೆ ಮುಖ್ಯ ಕಾರಣ ನಾವು ದಿನನಿತ್ಯ ತಿನ್ನುವ ಆಹಾರ. ಈ ಆಹಾರ ಪದ್ದತಿಯನ್ನು ನಾವು ಸಮತೋಲನದ ಕ್ರಮದಲ್ಲಿ ಬದಲಾಯಿಸದಿದ್ದರೇ ಮಕ್ಕಳಿಗೆ ಅರೋಗ್ಯದಲ್ಲಿ ಏರುಪೇರು ಆಗುತ್ತಿದೆ. ಆದ್ದರಿಂದ ಪೋಷಕರು ಈ ವಿಷಯಗಳ ಮೇಲೆ ಕಾಳಜಿ ವಹಿಸಬೇಕೆಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಸುಮಾರು 300ಕ್ಕೂ ಹೆಚ್ಚು ಎಲ್‌ಕೆಜಿ, ಯುಕೆಜಿ ಮತ್ತು ಒಂದನೇ ತರಗತಿ ಮಕ್ಕಳು ತಮ್ಮ ತಮ್ಮ ತಾಯಂದಿರಿಂದ ತಟ್ಟೆಯಲ್ಲಿ ಅಕ್ಕಿ ತುಂಬಿಸಿ ಅದರಲ್ಲಿ ಅರಿಶಿನ ಕೊನೆಯಿಂದ ಅಮ್ಮ ಎಂದು ಬರೆಯುವ ಮೂಲಕ ಅಕ್ಷರಾಭ್ಯಾಸ ಮಾಡಿದರು.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…