ಎಚ್.ಡಿ.ಕೋಟೆ : ಪಟ್ಟಣದ ಆದರ್ಶ ವಿದ್ಯಾಲಯದ ಹಿರೇಹಳ್ಳಿ ಗ್ರಾಮದ ವಿದ್ಯಾರ್ಥಿ ಯಶಿಕ್ ಶಿವನ್ ಅವರು ಟೆಲಿಸ್ಕೋಪ್ ಮೇಕಿಂಗ್‌ನಲ್ಲಿ ವಿಶ್ವ ದಾಖಲೆ ಮತ್ತು ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.
ಇದನ್ನು ಓದಿ: ದಸರಾ; ನೈಋತ್ಯ ರೈಲ್ವೆಗೆ ದಾಖಲೆ ಆದಾಯ
ದೊಡ್ಡಬಳ್ಳಾಪುರದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ, ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವದಾಖಲೆಯ ರಾಜ್ಯಮಟ್ಟದ ಪ್ರಥಮ ಟೆಲಿಸ್ಕೋಪ್ ತರಬೇತಿ ಶಿಬಿರದಲ್ಲಿ ನಾನು ವಿಜ್ಞಾನಿ-2025 ಎಂಬ ಕಾರ್ಯಕ್ರಮದಲ್ಲಿ ರಾಜ್ಯದಿಂದ 152 ಮಕ್ಕಳು 9 ದಿನಗಳ ಕಾಲ ನಡೆದ ಶಿಬಿರದಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನ ಹಿರೇಹಳ್ಳಿ ಗ್ರಾಮದ ಶ್ವೇತಶ್ರೀ ಮತ್ತು ಮಹದೇವಸ್ವಾಮಿ ಎಂಬವರ ಪುತ್ರ, ಆದರ್ಶ ವಿದ್ಯಾಲಯದ ಏಳನೇ ತರಗತಿ ವಿದ್ಯಾರ್ಥಿ ಯಶಿಕ್ ಶಿವನ್ ಭಾಗವಹಿಸಿ ವಿಶ್ವ ದಾಖಲೆ ಮಾಡಿದ್ದಾರೆ. ಸಂಸ್ಥಾಪಕ ಅಧ್ಯಕ್ಷರಾದ ಡಾ.ಹುಲಿಕಲ್ ನಟರಾಜ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಇಸ್ರೋದ ಮಾಜಿ ಅಧ್ಯಕ್ಷರಾದ ಡಾ.ಕಿರಣ್ ಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ವಿಜ್ಞಾನಿಗಳಾದ ಸತೀಶ್ ಆರ್ಯಭಟ ಮತ್ತು ಲಕ್ಷ್ಮಿಪತಿ ಅವರಿಂದ ತರಬೇತಿ ಪಡೆದು ವರ್ಲ್ಡ್ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್, ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಮಾಡುವ ಮೂಲಕ ಕೀರ್ತಿ ತಂದಿದ್ದಾರೆ ಎಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…