ಮೈಸೂರು

ಟೆಲಿಸ್ಕೊಪ್‌ ಮೇಕಿಂಗ್‌ನಲ್ಲಿ ವಿಶ್ವದಾಖಲೆ ಬರೆದ ಎಚ್.ಡಿ.ಕೋಟೆ ವಿದ್ಯಾರ್ಥಿ

ಎಚ್.ಡಿ.ಕೋಟೆ : ಪಟ್ಟಣದ ಆದರ್ಶ ವಿದ್ಯಾಲಯದ ಹಿರೇಹಳ್ಳಿ ಗ್ರಾಮದ ವಿದ್ಯಾರ್ಥಿ ಯಶಿಕ್ ಶಿವನ್ ಅವರು ಟೆಲಿಸ್ಕೋಪ್ ಮೇಕಿಂಗ್‌ನಲ್ಲಿ ವಿಶ್ವ ದಾಖಲೆ ಮತ್ತು ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.

ಇದನ್ನು ಓದಿ: ದಸರಾ; ನೈಋತ್ಯ ರೈಲ್ವೆಗೆ ದಾಖಲೆ ಆದಾಯ

ದೊಡ್ಡಬಳ್ಳಾಪುರದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ, ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವದಾಖಲೆಯ ರಾಜ್ಯಮಟ್ಟದ ಪ್ರಥಮ ಟೆಲಿಸ್ಕೋಪ್ ತರಬೇತಿ ಶಿಬಿರದಲ್ಲಿ ನಾನು ವಿಜ್ಞಾನಿ-2025 ಎಂಬ ಕಾರ್ಯಕ್ರಮದಲ್ಲಿ ರಾಜ್ಯದಿಂದ 152 ಮಕ್ಕಳು 9 ದಿನಗಳ ಕಾಲ ನಡೆದ ಶಿಬಿರದಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನ ಹಿರೇಹಳ್ಳಿ ಗ್ರಾಮದ ಶ್ವೇತಶ್ರೀ ಮತ್ತು ಮಹದೇವಸ್ವಾಮಿ ಎಂಬವರ ಪುತ್ರ, ಆದರ್ಶ ವಿದ್ಯಾಲಯದ ಏಳನೇ ತರಗತಿ ವಿದ್ಯಾರ್ಥಿ ಯಶಿಕ್ ಶಿವನ್ ಭಾಗವಹಿಸಿ ವಿಶ್ವ ದಾಖಲೆ ಮಾಡಿದ್ದಾರೆ. ಸಂಸ್ಥಾಪಕ ಅಧ್ಯಕ್ಷರಾದ ಡಾ.ಹುಲಿಕಲ್ ನಟರಾಜ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಇಸ್ರೋದ ಮಾಜಿ ಅಧ್ಯಕ್ಷರಾದ ಡಾ.ಕಿರಣ್ ಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ವಿಜ್ಞಾನಿಗಳಾದ ಸತೀಶ್ ಆರ್ಯಭಟ ಮತ್ತು ಲಕ್ಷ್ಮಿಪತಿ ಅವರಿಂದ ತರಬೇತಿ ಪಡೆದು ವರ್ಲ್ಡ್ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್, ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಮಾಡುವ ಮೂಲಕ ಕೀರ್ತಿ ತಂದಿದ್ದಾರೆ ಎಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

7 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

7 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

9 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

12 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

13 hours ago