Mysore
32
clear sky

Social Media

ಬುಧವಾರ, 04 ಮಾರ್ಚ್ 2026
Light
Dark

ಎಚ್.ಡಿ.ಕೋಟೆ: ಎರಡನೇ ಬಾರಿಗೆ ಭರ್ತಿಯಾದ ತಾರಕ ಜಲಾಶಯ

taaraka dam

ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಜಲಾಶಯ ಎರಡನೇ ಬಾರಿಗೆ ಭರ್ತಿಯಾಗಿದೆ.

ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಾದರೂ ನದಿಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸ್ಥಳೀಯ ಆಡಳಿತ, ತಾರಕ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿರುವುದರಿಂದ ಯಾವುದೇ ಕ್ಷಣದಲ್ಲಾದರೂ ಡ್ಯಾಂನ ಕ್ರಸ್ಟ್‌ ಗೇಟ್‌ಗಳ ಮೂಲಕ ನೀರನ್ನು ಬಿಡುಗಡೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿಪಾಸ್ತಿ ಮತ್ತು ಜಾನುವಾರುಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

Tags:
error: Content is protected !!