taaraka dam
ಎಚ್.ಡಿ.ಕೋಟೆ: ನೆರೆಯ ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಜಲಾಶಯ ಎರಡನೇ ಬಾರಿಗೆ ಭರ್ತಿಯಾಗಿದೆ.
ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಾದರೂ ನದಿಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸ್ಥಳೀಯ ಆಡಳಿತ, ತಾರಕ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿರುವುದರಿಂದ ಯಾವುದೇ ಕ್ಷಣದಲ್ಲಾದರೂ ಡ್ಯಾಂನ ಕ್ರಸ್ಟ್ ಗೇಟ್‌ಗಳ ಮೂಲಕ ನೀರನ್ನು ಬಿಡುಗಡೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿಪಾಸ್ತಿ ಮತ್ತು ಜಾನುವಾರುಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಟೆಹರಾನ್: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ…
ಪಾಂಡವಪುರ: ಸ್ಯಾಂಡಲ್‌ವುಡ್ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ…
ಪಾಟ್ನಾ: ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್ ಅವರಿಂದು ಪಾಟ್ನಾದ ಜೆಡಿಯು ಪಕ್ಷದ ಪ್ರಧಾನ ಕಚೇರಿಯಲ್ಲಿ ಜೆಡಿಯು…
ಬೆಂಗಳೂರು: ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ದಾಳಿ ನಡೆಸುತ್ತಿರುವ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಅದರ ಬಿಸಿ ರಾಜಧಾನಿ ಬೆಂಗಳೂರಿಗೆ…
ನವದೆಹಲಿ: ಭಾರತಕ್ಕೆ ರಷ್ಯಾ ತೈಲ ಖರೀದಿಗೆ ಅನುಮತಿ ಕೊಟ್ಟಿದ್ದೇವೆ ಎಂದ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಕಮಲ್ ಹಾಸನ್…
ನವದೆಹಲಿ: ಡಾರ್ಜಿಲಿಂಗ್‌ನಲ್ಲಿ ನಡೆದ 9ನೇ ಅಂತರಾಷ್ಟ್ರೀಯ ಸಂತಾಲ್ ಸಮ್ಮೇಳನದ ಸ್ಥಳ ಬದಲಾವಣೆ ಮತ್ತು ಸಂಬಂಧಿತ ವ್ಯವಸ್ಥೆಗಳು ಸೇರಿದಂತೆ ರಾಷ್ಟ್ರಪತಿ ದ್ರೌಪದಿ…