ಎಚ್.ಡಿ.ಕೋಟೆ: ಕಳೆದ ಕೆಲ ದಿನಗಳಿಂದ ಹುಲಿ ದಾಳಿಯಿಂದ ಭಯಭೀತರಾಗಿದ್ದ ಎಚ್.ಡಿ.ಕೋಟೆ ತಾಲ್ಲೂಕಿನ ಜನತೆಗೆ ಇದೀಗ ಕಾಡಾನೆಗಳ ಕಾಟ ಶುರುವಾಗಿದೆ.
ತಾಲ್ಲೂಕಿನ ಬೂದನೂರು ಹಾಡಿ ಬೋಚಿಕಟ್ಟೆ ರಸ್ತೆಯಲ್ಲಿ ಕಾಡಾನೆ ದಾಂಧಲೆ ನಡೆಸಿದ್ದು, ಜಮೀನಿಗೆ ತೆರಳುತ್ತಿದ್ದ ರೈತರ ಮೇಲೆ ದಾಳಿ ಮಾಡಲು ಯತ್ನಿಸಿದೆ. ಈ ವೇಳೆ ರೈತರು ಕ್ಷಣಾರ್ಧದಲ್ಲಿ ಆನೆ ದಾಳಿಯಿಂದ ಪಾರಾಗಿದ್ದು, ಜೀವ ಉಳಿಸಿಕೊಂಡಿದ್ದಾರೆ.
ಬಳಿಕ ರೊಚ್ಚಿಗೆದ್ದ ಕಾಡಾನೆಯು ಮನೆ ಬಳಿ ಕಟ್ಟಿ ಹಾಕಿದ್ದ ಮೇಕೆ ಮೇಲೆ ದಾಳಿ ಮಾಡಿ ಮೇಕೆ ಕಾಲನ್ನೇ ಮುರಿದು ಹಾಕಿದೆ.
ಈ ಭಾಗದಲ್ಲಿ ಕಳೆದ ತಿಂಗಳೆಲ್ಲ ಹುಲಿ ಕಾಟದಿಂದ ಜನರು ಭಯಭೀತರಾಗಿದ್ದರು. ಇದೀಗ ಆನೆಗಳ ಕಾಟ ಶುರುವಾಗಿದ್ದು, ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ…
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…