ಎಚ್.ಡಿ.ಕೋಟೆ: ತಾಲ್ಲೂಕಿನ ಗಣೇಶನಗುಡಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.
ರಾಮಕೃಷ್ಣಪ್ಪ ಎಂಬುವವರಿಗೆ ಸೇರಿದ ಇಟ್ಟಿಗೆ ಫ್ಯಾಕ್ಟರಿ ಹಾಗೂ ನಿವೃತ್ತ ಶಿಕ್ಷಕ ಚಿಕ್ಕಣ್ಣಯ್ಯ ಅವರ ಮನೆಯ ಹಿಂಭಾಗವಿರುವ ಜಮೀನಿನಲ್ಲಿ ಹುಲಿ ಓಡಾಟ ನಡೆಸಿದೆ.
ಇದನ್ನು ಓದಿ: ಪದೇ ಪದೇ ಜಾನುವಾರಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ
ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಭಯಭೀತರಾಗಿರುವ ಗ್ರಾಮಸ್ಥರು, ಜಮೀನುಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ.
ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯಾಧಿಕಾರಿಗಳು ಹುಲಿಯನ್ನು ಸೆರೆ ಹಿಡಿಯಲು ಸ್ಥಳಕ್ಕೆ ಧಾವಿಸಿದ್ದು, ಗ್ರಾಮಸ್ಥರು ಭಯಪಡದೇ ಎಚ್ಚರಿಕೆಯಿಂದ ಇರಬೇಕು. ಹುಲಿ ಸೆರೆಯಾಗುವವರೆಗೂ ಅನಗತ್ಯವಾಗಿ ಹೊರಗಡೆ ಓಡಾಡದಂತೆ ಸೂಚನೆ ನೀಡಿದ್ದಾರೆ.





