ಮೈಸೂರು

ಹಳ್ಳಿಹಕ್ಕಿ ಸಹಾ ತಮ್ಮ ಪತ್ನಿ ಹೆಸರಲ್ಲಿ ಮುಡಾದಲ್ಲಿ ನಿವೇಶನ ಹೊಂದಿದ್ದಾರೆ: ಕೆ.ಮರೀಗೌಡ

ಮೈಸೂರು: ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಕೂಡಾ ತಮ್ಮ ಪತ್ನಿಯ ಹೆಸರಲ್ಲಿ ಮುಡಾ ನಿವೇಶನವನ್ನು ಹೊಂದಿದ್ದಾರೆ ಎಂದು ಮುಡಾ ಅಧ್ಯಕ್ಷ ಕೆ. ಮರೀಗೌಡ ಆರೋಪಿಸಿದ್ದಾರೆ.

ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಆರೋಪ ಮಾಡಿದ್ದಾರೆ.

ವಿಶ್ವನಾಥ್‌ ತಮ್ಮ ಪತ್ನಿ ಶಾಂತಮ್ಮರ ಹೆಸರಿನಲ್ಲಿ 2017ರಲ್ಲಿ 60*40 ಅಳತೆಯ ಬದಲಿ ನಿವೇಶನವನ್ನು ಹೊಂದಿದ್ದಾರೆ. ವಿಶ್ವನಾಥ್‌ ಅವರು ತಮ್ಮ ಪತ್ನಿಯ ಹೆಸರಲ್ಲಿ ನಿವೇಶನ ಪಡೆದಿದ್ದು, ನಿವೇಶನ ಸಂಖ್ಯೆ 2,525ರ ಬದಲಿಗೆ ನಿವೇಶನ ಸಂಖ್ಯೆ 307ರ ಮುಖ್ಯರಸ್ತೆ ಜಾಗ ಪಡೆದಿದ್ದಾರೆ ಎಂದು ಮುಡಾ ಅಕ್ರಮದ ಬಗ್ಗೆ ಪ್ರಸ್ತಾಪಿಸಿದ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ದೇವನೂರು ಮೂರನೇ ಹಂತದ ಬದಲಿಗೆ ಮುಖ್ಯರಸ್ತೆಯಲ್ಲಿ ಎಂಎಲ್‌ಸಿ ಎಚ್.‌ ವಿಶ್ವನಾಥ್‌ ನಿವೇಶನ ಪಡೆದಿದ್ದಾರೆ. ಹಳ್ಳಿಹಕ್ಕಿ ರಾಜಕೀಯವಾಗಿ ದಿವಾಳಿಯಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿಕೊಂಡು ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.

ಮುಡಾದಲ್ಲಿ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಎಲ್ಲವೂ ಕೂಲಂಕುಶವಾಗಿ ತನಿಖೆ ಆಗಲಿದೆ. ಈ ಬಗ್ಗೆ ಈಗಲೇ ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…

16 mins ago

ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ಅಟ್ಯಾಕ್: ಮಗು ಸೇರಿ ಮೂವರಿಗೆ ಗಂಭೀರ ಗಾಯ

ನಂಜನಗೂಡು: ಜಮೀನಿಗೆ ಬೈಕ್‌ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…

46 mins ago

ತಗಡೂರು ಖಾದಿ ಕೇಂದ್ರ ಪುನಶ್ಚೇತನಕ್ಕೆ ಪಣ

ಹಿರಿಯ ರಂಗಕರ್ಮಿ ಹೆಗ್ಗೂಡು ಪ್ರಸನ್ನ ನೇತೃತ್ವದಲ್ಲಿ ನಡೆದ ಸಭೆ; ಸುರೇಂದ್ರ ಕೌಲಗಿ ಮತ್ತಿತರರು ಭಾಗಿ ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ…

52 mins ago

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್‌…

1 hour ago

ಹುಮನಾಬಾದ್ ಸ್ಫೋಟ: ತನಿಖೆಗೆ ಈಶ್ವರ ಖಂಡ್ರೆ ಆದೇಶ

ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…

2 hours ago

ನಿಗೂಢ ವಸ್ತು ಸ್ಫೋಟ: 6 ಶಾಲಾ ಮಕ್ಕಳಿಗೆ ಗಂಭೀರ ಗಾಯ

ಬೀದರ್:‌ ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…

3 hours ago