ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು ಪಟ್ಟಣ ಹೊರವಲಯದಲ್ಲಿ ನಡೆದಿದೆ.
ಹನೂರು ಪಟ್ಟಣದ ಅಂಬೇಡ್ಕರ್ ಬೀದಿ ನಿವಾಸಿ ರಾಜಣ್ಣ (60) ಮೃತಪಟ್ಟವರು.
ಘಟನೆ ವಿವರ
ರಾಜಣ್ಣ ಅವರು ಸೆ.16 ರಂದು ಬೆಳಿಗ್ಗೆ 8 ಗಂಟೆಗೆ ಮಂಗಲ ಗ್ರಾಮಕ್ಕೆ ಗಾರೆ ಕೆಲಸಕ್ಕೆಂದು ಹೋಗಿದ್ದರು. ರಾತ್ರಿಯಾದರೂ ಮನೆಗೆ ಬಾರದಿದ್ದರಿಂದ ಕುಟುಂಬಸ್ಥರು ಪಟ್ಟಣದಾದ್ಯಂತ ಹುಡುಕಾಟ ನಡೆಸಿದ್ದಾರೆ.
ಸೆ.17 ರ ಮುಂಜಾನೆ 1 ರಿಂದ 6 ಗಂಟೆಯವರೆಗೆ ಸುರಿದ ಭಾರಿ ಮಳೆಯಿಂದಾಗಿ ಹನೂರು-ಕೊಳ್ಳೇಗಾಲ ಮುಖ್ಯರಸ್ತೆಯ ಪೊಲೀಸ್ ವಸತಿ ಗೃಹದ ಮುಂಭಾಗದ ಹಳ್ಳದಲ್ಲಿ ಅಪಾರ ಪ್ರಮಾಣದ ನೀರು ಹರಿಯುತ್ತಿತ್ತು. ಕೆಲಸ ಮುಗಿಸಿ ನಡೆದುಕೊಂಡು ಬರುತ್ತಿದ್ದ ರಾಜಣ್ಣ ಅವರು ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿ ಹಳ್ಳದ ಪೊದೆಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಹನೂರು ಪೊಲೀಸ್ ವಸತಿ ಗೃಹದ ಸಮೀಪದ ಕೊರಕಲು ಹಳ್ಳದಲ್ಲಿ ಶವ ಸಿಲುಕಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ಕುಟುಂಬಸ್ಥರು ಮೃತದೇಹವನ್ನು ಗುರುತಿಸಿದ್ದಾರೆ.
ಮೃತದೇಹವನ್ನು ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರಕ್ಕೆ ರವಾನಿಸಲಾಗಿದ್ದು, ಈ ಕುರಿತು ಮೃತರ ಪುತ್ರ ಮಹೇಶ್ ಕುಮಾರ್ ಅವರು ಹನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…