ಮೈಸೂರು

ಈ ಬಾರಿ ಅದ್ದೂರಿ ನಾಡಹಬ್ಬ ದಸರಾ ಆಚರಣೆ ಮಾಡಲಾಗುವುದು: ಎಚ್‌ಸಿ ಮಹದೇವಪ್ಪ

ಮೈಸೂರು: ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರಾಜ್ಯದ ಜನರು ಖುಷಿಯಿಂದ ಇದ್ದಾರೆ. ಆದ್ದರಿಂದ ವಿಶ್ವವಿಖ್ಯಾತ ನಾಡ ಹಬ್ಬ ದಸರಾ ವನ್ನು ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ ಮಹದೇವಪ್ಪ ತಿಳಿಸಿದರು.

ಇಂದು (ಆಗಸ್ಟ್ 16) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ದಸರಾ ಆಚರಣೆ ಕುರಿತ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೊನ್ನೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಹೈ ಪವರ್ ಕಮಿಟಿ ಸಭೆ ನಡೆಯಿತು. ಈ ಸಭೆಯಲ್ಲಿ ದಸರಾ ಆಚರಣೆಗೆ ಅನುದಾನ, ಅನುದಾನ ಬಳಕೆಗೆ 4ಜಿ ವಿನಾಯಿತಿ ನೀಡುವ ಬಗ್ಗೆ ಹಾಗೂ ದಸರಾ ಉದ್ಘಾಟಕರ ಆಯ್ಕೆ ಬಗ್ಗೆ ಚರ್ಚಿಸಲಾಗಿದೆ. ದಸರಾ ಆಚರಣೆಗೆ ಹೆಚ್ಚಿನ ಪ್ರಾಯೋಜಕತ್ವ ಪಡೆಯಲು ಅಧಿಕಾರಿಗಳು ಮುಂದಾಗಬೇಕು. ಅಕ್ಟೋಬರ್ 03 ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45 ಗಂಟೆಯೊಳಗೆ ದಸರಾ ಉದ್ಘಾಟನೆ ಮಾಡಲಾಗುವುದು ಎಂದರು.

ಈ ಬಾರಿ ದಸರಾ ಆಚರಣೆಗೆ 40 ಕೋಟಿ ವರೆಗೂ ಅನುದಾನ ಬಳಕೆಗೆ ಅವಕಾಶ ಕಲ್ಪಿಸಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಮೈಸೂರು ನಗರದ ಎಲ್ಲಾ ರಸ್ತೆಗಳನ್ನು ಪರಿಶೀಲಿಸಿ ಗುಂಡಿ ಮುಚ್ಚಿ, ಮರು ಡಾಂಬರೀಕರಣ ಮಾಡಲಾಗುವುದು ಎಂದರು.

ದಸರಾ ಆಚರಣೆಯಲ್ಲಿ ಅಧಿಕಾರಿಗಳು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ಆಹಾರ ಮೇಳವನ್ನು ಸ್ಕೌಟ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪ್ಯಾಲೇಸ್ ಆವರಣದಲ್ಲಿ ಆಯೋಜಿಸಬೇಕು ಎಂದರು.

ಸ್ತಬ್ಧ ಚಿತ್ರಗಳ ಲ್ಲಿ ಕರ್ನಾಟಕ ಸರ್ಕಾರದ 5 ಗ್ಯಾರೆಂಟಿಗಳ ಕುರಿತ ಸ್ತಬ್ಧ ಚಿತ್ರಗಳು ಇರಬೇಕು. ಜೊತೆಗೆ ಸರ್ಕಾರದ ಒಂದು ವರ್ಷದ ಸಾಧನೆ ಕುರಿತ ಸ್ತಬ್ಧ ಚಿತ್ರ ಇರಬೇಕು. ದೀಪಾಲಂಕಾರ 21 ದಿನಗಳ ಕಾಲ ಇರಬೇಕು. ದೀಪಾಲಂಕಾರ ದಸರಾ ಆಚರಣೆ ಯ ಮೇರುಗನ್ನು ಹೆಚ್ಚಿಸುತ್ತದೆ. ದೀಪಾಲಂಕಾರವನ್ನು ದಸರಾ ಮಹೋತ್ಸವದಲ್ಲಿ ಪ್ರಮುಖ ವೃತ್ತಗಳಲ್ಲಿ ಮಾಡುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.

ಯುವ ಸಂಭ್ರಮ ಹಾಗೂ ಯುವ ದಸರಾ ಕಾರ್ಯಕ್ರಮಗಳಿಗೆ ಕಳೆದ ಎರಡು ವರ್ಷಗಳಲ್ಲಿನ ಕಾರ್ಯಕ್ರಮಗಳು ಹಾಗೂ ಕಲಾವಿದರೂ ಪುನರಾವರ್ತನೆಯಾಗದಂತೆ ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಚಿವರು ತಿಳಿಸಿದರು.

ಚಿಣ್ಣರ ದಸರಾ, ಮಹಿಳಾ ದಸರಾ ಹಾಗೂ ರೈತ ದಸರ ಕಾರ್ಯಕ್ರಮ ಅರ್ಥ ಪೂರ್ಣವಾಗಿ ನಡೆಸಬೇಕು. ಸ್ವತಂತ್ರ ದೇಶಾಭಿಮಾನದ ಸಂದೇಶಗಳನ್ನು ಸಾರುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಕಾರ್ಯಕ್ರಮಗಳನ್ನು ಮಾಡಲಾಗುವುದು ಎಂದರು.

ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಮಾತನಾಡಿ ದಸರಾ ಆಚರಣೆಗೆ 19 ಉಪ ಸಮಿತಿಗಳನ್ನು ರಚಿಸಲಾಗಿದೆ. ಗಜ ಪಯಣವನ್ನು ಆಗಸ್ಟ್ 21 ರಂದು ನಿಗದಿ ಮಾಡಲಾಗಿದೆ. ಕರ್ನಾಟಕ ಸಂಭ್ರಮ 50 ನ್ನು ಆಚರಣೆ ಮಾಡಲಾಗುತ್ತಿದೆ. ಇದರ ಲಾಂಛನವನ್ನು ದಸರಾ ಆಚರಣೆಯಲ್ಲಿ ಅಳವಡಿಸಲಾಗುವುದು.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ಮಾತನಾಡಿ ವಾರ್ತಾ ಇಲಾಖೆಯ 20 ಬೋರ್ಡ್ ಗಳನ್ನು ಡಿಜಿಟಲೀಕರಣ ಮಾಡಿ ಅಲ್ಲಿ ದಸರಾ ಪ್ರಚಾರವನ್ನು ಮಾಡಬೇಕು. ಆಹಾರ ಮೇಳ ಕನಿಷ್ಠ 1 ತಿಂಗಳು ಇರಬೇಕು. ಆಹಾರ ಮೇಳದಲ್ಲಿ ಸ್ವಚ್ಚತೆ ಕಾಪಾಡಿಕೊಂಡು ಗುಣಮಟ್ಟದ ಆಹಾರ ನೀಡಬೇಕು. ಕಡಿಮೆ ದರದಲ್ಲಿ ಆಹಾರ ನೀಡಬೇಕು.

ಅರಣ್ಯ ವಸತಿ ಹಾಗೂ ವಿಹಾರ ದಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ಶಾಸಕರಾದ ಅನಿಲ್ ಚಿಕ್ಕಮಾದು ಅವರು ಮಾತನಾಡಿ ಅರ್ಜುನ ಆನೆ ವೀರ ಮರಣ ಹೊಂದಿದ್ದು ಅದರ ಹೆಸರಿನಲ್ಲಿ ಮಾವುತರಿಗೆ ಪ್ರಶಸ್ತಿ ನೀಡಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿ ಸಿದ್ದೇಗೌಡ, ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್ ನ ಅಧ್ಯಕ್ಷರು ಹಾಗೂ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪುಟ್ಟರಂಗ ಶೆಟ್ಟಿ, ಕರ್ನಾಟಕ ರಾಜ್ಯ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಕೃಷ್ಣ ರಾಜ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀವತ್ಸ, ಕೆ ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ರವಿಶಂಕರ್, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಎಂ ಗಣೇಶ್ ಪ್ರಸಾದ್, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎ.ಆರ್ ಕೃಷ್ಣಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ವಿಶ್ವನಾಥ್, ಡಿ.ತಿಮ್ಮಯ್ಯ, ಕೆ.ವಿವೇಕಾನಂದ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ:  ಚಳಿಗಾಲದ ಸಂಸತ್ ಅಧಿವೇಶನದ ಒಂದು ವಾರೆನೋಟ

ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್‌  ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…

16 mins ago

ಅಕ್ರಮ ಗಾಂಜಾ ಮಾರಾಟ: ಮಹಿಳೆ ಬಂಧನ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…

25 mins ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರಕ್ಕೆ ಜೈಲು ಶಿಕ್ಷೆ ಸ್ವಾಗತಾರ್ಹ

ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…

1 hour ago

ಓದುಗರ ಪತ್ರ: ಬಿಎಂಟಿಸಿ ಜನಹಿತ ಕಾಯಲಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…

2 hours ago

ಓದುಗರ ಪತ್ರ: ಸಾರ್ವಜನಿಕ ಗ್ರಂಥಾಲಯದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…

2 hours ago

‘ಶಕ್ತಿ’ ಸ್ಕೀಮ್‌ನಿಂದ ಸಾರಿಗೆ ನಿಗಮಗಳಿಗೆ ನಿಶ್ಶಕ್ತಿ!

ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…

2 hours ago