ಮೈಸೂರು

ಶಿಸ್ತು ಬದ್ಧ ಜೀವನ ನಡೆಸಲು ಯೋಗ ಅತ್ಯಂತ ಪ್ರೇರಣೆ: ಎಚ್‌ಸಿ ಮಹದೇವಪ್ಪ

ಮೈಸೂರು: ಭಾರತ ದೇಶವು ವಿಶ್ವಸಂಸ್ಥೆಯ ಮೇಲೆ ಪ್ರಭಾವ ಬೀರಿ ಯೋಗವನ್ನು ಅಂತರಾಷ್ಟ್ರೀಯ ದಿನವನ್ನಾಗಿ ಆಚರಣೆ ಮಾಡಲು ಘೋಷಣೆ ಮಾಡಿ ಇಂದಿಗೆ ಹತ್ತು ವರ್ಷವಾಗಿದೆ. ಶಿಸ್ತು ಬದ್ಧ ಜೀವನ ನಡೆಸಲು ಯೋಗ ಅತ್ಯಂತ ಪ್ರೇರಣೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು.

ನಗರದ ಅರಮನೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್‌ ಇಲಾಖೆ ವತಿಯಿಂದ ನಡೆದ ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿ, ಯೋಗದ ನಿಯಮಗಳನ್ನು ಪಾಲಿಸುವಲ್ಲಿ ಭಾರತ ಪ್ರಪಂಚದ ಇತರ ರಾಷ್ಟ್ರಗಳಿಗಿಂತ ಮುಂಚೂಣಿಯಲ್ಲಿದೆ. ಯೋಗ ಮಾಡುವುದರಿಂದ ನಮ್ಮ ದೇಹದ ನಿಯಂತ್ರಣ, ಅಂಗಾಂಗಗಳ ಪರಿಪೂರ್ಣ ಮತ್ತು ಕ್ರಮಬದ್ಧವಾದ ಕಾರ್ಯ ಚಟುವಟಿಕೆ, ಮನಸ್ಸಿನ ಸಮತೋಲನ ಆರೋಗ್ಯದ ವೃದ್ಧಿ, ಶಿಸ್ತು ಬದ್ಧವಾದ ಜೀವನ ನಡೆಸಲು ಅತ್ಯಂತ ಪ್ರೇರಣೆಯಾಗಿರುವುದು ಆರೋಗ್ಯ ಎಂದು ಹೇಳಿದರು.

ಯೋಗವನ್ನು ನಿಯಮ ಬದ್ಧವಾಗಿ ಪಾಲನೆ ಮಾಡುವುದರಿಂದ ಶಿಸ್ತು ಬದ್ಧ ಜೀವನ ನಡೆಸಿ, ಆರೋಗ್ಯದ ವೃದ್ಧಿ ಮಾಡಿಕೊಂಡು ಸಮಾಜ ಹಾಗೂ ಕುಟುಂಬವನ್ನು ಲವಲವಿಕೆಯಿಂದ ನೋಡಿಕೊಂಡು ಹೋಗಬಹುದು. ಕಳೆದು ಬಾರಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ಸಂದರ್ಭದಲ್ಲಿ ರೈಸ್ ಕೋರ್ಸ್ ನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮಾಡಿ ವಿಶ್ವ ಗಿನ್ನಿಸ್ ದಾಖಲೆಯನ್ನು ಮೈಸೂರು ಮಾಡಿತ್ತು ಎಂದರು. ನಿರ್ದಿಷ್ಟವಾದ ದೇಹದ ಸಮಸ್ಯೆಗಳಿಗೆ ನಿರ್ದಿಷ್ಟವಾದ ಯೋಗ ಕ್ರಿಯೆಗಳನ್ನು ಮಾಡಿದ್ದಲ್ಲಿ ಆರೋಗ್ಯಯುತವಾಗಿರಲು ಸಾಧ್ಯ ಎಂಬುದನ್ನು ವೈದ್ಯಕೀಯ ಶಾಸ್ತ್ರ ಹಾಗೂ ತಜ್ಞರು ಹೇಳಿದ್ದಾರೆ ಎಂದರು.

ಸಂಸದ ಯದುವೀ‌ರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ಅವರು ಮಾತನಾಡಿ, ಮೈಸೂರಿನಲ್ಲಿ ಯೋಗ ದಿನಾಚರಣೆಯನ್ನು ಪ್ರತಿ ವರ್ಷವೂ ಬಹಳ ದೊಡ್ಡ ಮಟ್ಟದಲ್ಲಿ ಆಚರಣೆ ಮಾಡುತ್ತಾ ಬಂದಿದ್ದೇವೆ. ಭಾರತದಲ್ಲಿ ಆಧುನಿಕ ಕಾಲದ ಯೋಗ ಮೈಸೂರಿನಿಂದ ಸೃಷ್ಟಿಯಾಗಿದೆ ಎಂದರೆ ತಪ್ಪಿಲ್ಲ. ಅಂದಿನ ಕಾಲದ ಶ್ರೀತತ್ವ ನಿಧಿಯಲ್ಲಿ 108 ಆಸನಗಳನ್ನು ದಾಖಲೆ ಮಾಡಿ ಮುಮ್ಮಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ಯೋಗ ಅಭ್ಯಾಸ ಮೈಸೂರಿನಲ್ಲಿ ಶುರುವಾಗಿತ್ತು ಎಂದರು.

ಹಿಂದಿನ ಪರಂಪರೆಯ ರಾಯಭಾರಿಯಾಗಿ ಇಂದು ಯೋಗ ದಿನಾಚರಣೆಯನ್ನು ಆಚರಣೆ ಮಾಡುತ್ತಿದ್ದೇವೆ. ದಸರಾ ಸಂದರ್ಭದಲ್ಲಿ ಯೋಗ ದಿನವನ್ನು ಗಿನ್ನಿಸ್ ದಾಖಲೆಗೆ ಮಾಡಲು ಸಿದ್ಧವಾಗಬೇಕು ಇದಕ್ಕೆ ನಮ್ಮ ಸಹಕಾರ ಇರುತ್ತದೆ ಎಂದು ಹೇಳಿದರು.

ಶಾಸಕರಾದ ಟಿ.ಎಸ್‌.ಶ್ರೀವತ್ಸ ಅವರು ಮಾತನಾಡಿ, ಎಲ್ಲರಿಗೂ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳು. ಕಳೆದ ಎರಡು ವರ್ಷದ ಹಿಂದೆ ಮೈಸೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಮ್ಮೊಂದಿಗೆ ಯೋಗ ಮಾಡಿದ್ದು ನೆನಪಿಗೆ ಬರುತ್ತದೆ. ಯೋಗ ಎಂದರೆ ಮೈಸೂರು ಎಂದರೆ ಯೋಗ. ಅನೇಕ ಪ್ರಥಮಗಳಿಗೆ ಮೈಸೂರು, ಮಹಾರಾಜರು ಮೈಸೂರು ಅರಮನೆ, ಕಾರಣವಾಗಿದೆ. ಇದನ್ನು ಇಂದು ನೆನೆದುಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಮಾತನಾಡಿ, ಪತಂಜಲಿ ಮಹಾಮುನಿಗಳಿಂದ ಯೋಗ ಪ್ರಪಂಚಕ್ಕೆ ಪರಿಚಯವಾಗಿದೆ. ಜಾಗತಿಕ ಮಟ್ಟದಲ್ಲಿ ಯೋಗದ ಮಹತ್ವ ಅರಿತು ಪಾಶ್ಚಿಮಾತ್ಯ ದೇಶಗಳು ಯೋಗದ ಬೆಳವಣಿಗೆಗೆ ಸಹಕರಿಸುತ್ತಿದ್ದಾರೆ. ಯೋಗಕ್ಕೆ ಭಾರತದ ಕೊಡುಗೆ ಜೊತೆಗೆ ಮೈಸೂರು ಸಹ ಯೋಗದ ಭೂಪಟದಲ್ಲಿ ತನ್ನದೇ ಆದ ಛಾಪುವನ್ನು ಮೂಡಿಸಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಬೇರೆಯ ಕಾರ್ಯಕ್ರಮದಲ್ಲಿ ಜನಸಾಮಾನ್ಯರನ್ನು ಸೇರಿಸಲು ಜಿಲ್ಲಾಡಳಿತ ಪ್ರಯತ್ನಿಸುತ್ತೇವೆ ಆದರೆ ಯೋಗಕ್ಕೆ ಆಹ್ವಾನ ನೀಡಿದರೆ ಎಲ್ಲ ಸಂಘ ಸಂಸ್ಥೆಗಳನ್ನು ಒಟ್ಟುಗೂಡಿ ಜನರು ಬರುತ್ತಾರೆ. ದಸರಾ ಸಂದರ್ಭದಲ್ಲಿ ಎಲ್ಲಾ ರೀತಿಯ ಸಿದ್ಧತೆಗಳೊಂದಿಗೆ ಮತ್ತೊಮ್ಮೆ ಮೈಸೂರು ನಲ್ಲಿ ಯೋಗಾದ ಗಿನ್ನಿಸ್ ದಾಖಲೆ ನಿರ್ಮಿಸಲು ಜಿಲ್ಲಾಡಳಿತ ಕಾರ್ಯನಿರ್ವಹಿಸುತ್ತದೆ. ದಸರಾ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಸಭೆ ಮಾಡಿ ಯೋಗ ದಸರವನ್ನು ಆಚರಣೆ ಮಾಡಿಯೋಗದ ಮಹತ್ವವನ್ನು ಎಲ್ಲೆಡೆ ಸಾರೋಣ ಎಂದು ಹೇಳಿದರು.

ಜಿಲ್ಲಾಡಳಿತದ ಯೋಗ ದಿನಾಚರಣೆಯ ಕಾರ್ಯಕ್ರಮಕ್ಕೆ ಕೈಜೋಡಿಸಿದಂತಹ ಮೈಸೂರು ಜಿಲ್ಲಾ ಯೋಗ ಒಕ್ಕೂಟ, ಮೈಸೂರು ಜಿಲ್ಲಾ ಯೋಗ ಫೌಂಡೇಶನ್, ಯೋಗ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಇಲ್ಲಿ ಸೇರಿರುವ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಸಿ.ಎನ್.ಮಂಜೇಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಆಯುಷ್ ವೈದ್ಯಾಧಿಕಾರಿ ಡಾ.ಪುಷ್ಪ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago