ಮೈಸೂರು

ಸರ್ಕಾರಿ ಜಾಗ ಸಿಕ್ಕರೆ ಬೊಕ್ಕಹಳ್ಳಿ ಗ್ರಾಮ ಸ್ಥಳಾಂತರಕ್ಕೆ ಚಿಂತನೆ: ಎಚ್‌ಸಿ ಮಹದೇವಪ್ಪ

ಮೈಸೂರು: ವಾಡಿಕೆಗಿಂತ ಈ ಬಾರಿ ಶೇಕಡ 75 ರಷ್ಟು ಹೆಚ್ಚು ಮಳೆ ಸುರಿದಿದ್ದು ಬೊಕ್ಕಹಳ್ಳಿ ಗ್ರಾಮಕ್ಕೆ ಹೆಚ್ಚು ನೀರು ನುಗ್ಗಿದೆ, ಗ್ರಾಮಸ್ಥರು ಗ್ರಾಮದ ಸ್ಥಳಾಂತರಕ್ಕೆ ಒತ್ತಾಯಿಸುತಿದ್ದು ಅಂತಹ ಸಂದರ್ಭ ಸೃಷ್ಟಿಯಾಗಿಲ್ಲ. ಅದರೂ ಗ್ರಾಮಸ್ಥರ ಮನವಿ ಮೇರೆಗೆ ಸರ್ಕಾರಿ ಜಾಗದ ಲಭ್ಯತೆಯ ಆಧಾರದಂತೆ ಗ್ರಾಮ ಸ್ಥಳಾಂತರಿಸಲು ಪರಿಶೀಲಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಅಭಿಪ್ರಾಯಿಸಿದರು.

ಶನಿವಾರ (ಆ.03) ನಂಜನಗೂಡು ತಾಲ್ಲೂಕು ಬೊಕ್ಕಹಳ್ಳಿ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಅವರ ಜತೆಗೂಡಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿ ಕಾಳಜಿ ಕೇಂದ್ರದಲ್ಲಿನ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಬಾರಿ ಹೊಳೆಯಿಂದ 80 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಬಂದುದರಿಂದ ಗ್ರಾಮದ ಕೆಲ ಜಮೀನುಗಳು ಮುಳುಗಡೆಯಾಗಿ, ಕೆಲ ಮನೆಗಳಿಗೆ ಭಾಗಶಃ ಹಾನಿಯಾಗಿದೆ. 80 ಮನೆಗಳಿಗೆ ನೀರು ನುಗ್ಗಿದ್ದು, 215 ಜನರನ್ನು ಸ್ಥಳಾಂತರಿಸಲಾಗಿದೆ. 78 ಜನ ಕಾಳಜಿ ಕೇಂದ್ರದಲ್ಲಿ ಉಳಿದಿದ್ದಾರೆ. ಜಿಲ್ಲಾಡಳಿತ ತಗ್ಗಿನ ಪ್ರದೇಶದ ಮನೆಗಳವರಿಗೆ ಜಾಗೃತಿ ಮೂಡಿಸುವುದರೊಂದಿಗೆ ಊಟ,ವಸತಿಗಳೊಂದಿಗೆ ಸಮರ್ಪಕ ವ್ಯವಸ್ಥೆಗಳನ್ನು ಕಲ್ಪಿಸಿದೆ ಎಂದರು.

ಒಟ್ಟಾರೆ ಜಿಲ್ಲೆಯಲ್ಲಿ 345 ಮನೆಗಳಿಗೆ ಹಾನಿಯಾಗಿದ್ದು, 256 ಮನೆಗಳಿಗೆ ಪರಿಹಾರ ನೀಡಲಾಗಿದೆ, 268 ಮನೆಗಳು ಭಾಗಶಃ ಹಾನಿಯಾಗಿವೆ ಇವುಗಳಿಗೆ ಎನ್.ಡಿ.ಆರ್.ಎಫ್ ನಿಯಮಾವಳಿಯಂತೆ ಪರಿಹಾರ ನೀಡಲಾಗಿದೆ. ಜಿಲ್ಲೆಯಲ್ಲಿ 220 ಶಾಲೆಗಳು,60 ಅಂಗನವಾಡಿ‌ ಕೇಂದ್ರಗಳು, 40 ರಿಂದ 50 ಕಿಮೀ ಗ್ರಾಮೀಣ ರಸ್ತೆ, 25 ಕಿಮೀ ಪಿಡ್ಲೂಡಿ ರಸ್ತೆ ಹಾಳಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಯತೀಂದ್ರ, ಜಿಲ್ಲಾಧಿಕಾರಿ ಲಕ್ಷೀಕಾಂತ ರೆಡ್ಡಿ, ಜಿ.ಪಂ.ಸಿಇಒ ಕೆ.ಎಂ.ಗಾಯತ್ರಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

1 hour ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

1 hour ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

1 hour ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

2 hours ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

2 hours ago