ಮೈಸೂರು

ಎಚ್.ಡಿ ಕೋಟೆ: ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ

ಎಚ್.ಡಿ.ಕೋಟೆ: ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ಪತ್ನಿಯನ್ನೇ ಕತ್ತು ಕೊಯ್ದು ಕೊಲೆ ಮಾಡಿ ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ನಡೆದಿದೆ.

ತಾಲ್ಲೂಕಿನ ಕಣಿಯನಹುಂಡಿ ಗ್ರಾಮದ ತೇಜಸ್ವಿನಿ (25) ಗಂಡನಿಂದ ಕೊಲೆಯಾದ ಮಹಿಳೆ. ಗ್ರಾಮದ ರೈತ ದೇವರಾಜ ಕೊಲೆಗೈದ ಆರೋಪಿ.

7 ವರ್ಷಗಳ ಹಿಂದೆ ತನ್ನ ಅಕ್ಕನ ಮಗಳಾದ ಕುಟ್ಟವಾಡಿ ಬಸವಾಳ ಗ್ರಾಮದ ವಾಸಿ ತೇಜಸ್ವಿನಿಯನ್ನು ದೇವರಾಜ ಮದುವೆಯಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಸಹ ಇದ್ದಾರೆ. ಒಂದೂವರೆ ತಿಂಗಳ ಹಿಂದೆ ತೇಜಸ್ವಿನಿ ತಮ್ಮ ಸ್ವಂತ ಊರಿನ ದರ್ಶನ್ ಗೌಡ ಎಂಬವರ ಜೊತೆ ಓಡಿ ಹೋಗಿದ್ದರು. ನಂತರ ಪೊಲೀಸ್ ಠಾಣೆಗೆ ದೂರು ನೀಡಿ ತೇಜಸ್ವಿನಿಯನ್ನು 2  ದಿನಗಳ ನಂತರ ಬೆಂಗಳೂರಿನಿಂದ ಕರೆತಂದು, ಸ್ವಲ್ಪ ದಿನ ತವರು ಮನೆಗೆ ಬಿಟ್ಟಿದ್ದರು.

ಮಂಗಳವಾರ ಗಂಡನ ಮನೆಗೆ ಹೋಗುತ್ತೇನೆ ಎಂದು ಕೋಟೆ ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದು, ದೇವರಾಜರ ಜೊತೆಗೆ ಕಣಿಯನ ಹುಂಡಿ ಗ್ರಾಮದ ತೋಟದ ಮನೆಗೆ ಕಳಿಸಲಾಗಿತ್ತು. ಪತ್ನಿಯ ನಡವಳಿಕೆಯಿಂದ ಬೇಸತ್ತ ದೇವರಾಜ ಮನೆಯಲ್ಲಿ ಮಧ್ಯಾಹ್ನ 12 ಗಂಟೆ ಸಂದರ್ಭದಲ್ಲಿ ಯಾರೂ ಇಲ್ಲದಿದ್ದ ಸಂದರ್ಭದಲ್ಲಿ ಮನೆ ಹಿಂಭಾಗ ಕರೆದೊಯ್ದು, ಆಕೆಯ ಕತ್ತನ್ನು ಕೊಯ್ದು ಸಾಯಿಸಿ, ನಂತರ ಹಂಪಾಪುರ ಉಪ ಪೊಲೀಸ್ ಠಾಣೆಯ ಪೇದೆ ಸುರೇಶ ಅವರಿಗೆ ನಡೆದ ವಿಚಾರದ ಬಗ್ಗೆ ದೂರವಾಣಿ ಮುಖಾಂತರ ತಿಳಿಸಿದ್ದಾರೆ. ಅವರು ಠಾಣೆಗೆ ಬರುವಂತೆ ತಿಳಿಸಿದ್ದಾರೆ. ಕೋಟೆ ಪೊಲೀಸ್ ಠಾಣೆಯ ಎಸ್‌ಐ ಸುರೇಶ್ ನಾಯಕ್, ಮಾದೇವಸ್ವಾಮಿ ಹಂಪಾಪುರ ಪೊಲೀಸ್ ಠಾಣೆಗೆ ಹೋಗಿ ಆರೋಪಿ ದೇವರಾಜ ಅವರನ್ನು ಕೋಟೆ ಪೊಲೀಸ್ ಠಾಣೆಗೆ ಕರೆತಂದು ಬಂಧಿಸಿದ್ದಾರೆ.

ಸ್ಥಳಕ್ಕೆ ಸರ್ಕಲ್ ಇನ್‌ಸ್ಪೆಕ್ಟರ್ ಶಬೀರ್ ಹುಸೇನ್ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಸ್‌ಪಿ ವಿಷ್ಣುವರ್ಧನ್, ಡಿವೈಎಸ್ಪಿ ಗೋಪಾಲಕೃಷ್ಣ, ಮತ್ತಿತರರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

9 mins ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

3 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

3 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

4 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

4 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

4 hours ago