ಮೈಸೂರು: ಹೆಚ್.ಡಿ ಕೋಟೆ ತಾಲೂಕಿನ ಮಳಲಿ ಗ್ರಾಮದ ಕಬೀನಿ ಹಿನ್ನೀರಿನ ಸಮೀಪ ಸಾರ್ವಜನಿಕರಿಗೆ ಕಾಣಿಸಿಕೊಂಡು ಆತಂಕ ಸೃಷ್ಠಿಸಿದ್ದ ಗಂಡು ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಫಲರಾಗಿದ್ದಾರೆ.
ಮಳಲಿ ಗ್ರಾಮದ ಜನವಸತಿ ಪ್ರದೇಶದಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಕಾಣಿಸಿಕೊಂಡು, ಇಲ್ಲಿನ ಸಾರ್ವಜನಿಕರಿಗೆ ಆತಂಕವೊಡ್ಡಿತ್ತು. ಮುಂಜಾಗ್ರತಾ ಕ್ರಮವಾಗಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ತಕ್ಷಣ ಧಾವಿಸಿದ್ದ ಅರಣ್ಯ ಅಧಿಕಾರಿಗಳು ಅರವಳಿಕೆ ಚುಚ್ಚುಮದ್ದು ನೀಡಿ ಹುಲಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಗ್ರಾಮಸ್ಥರಲ್ಲಿ ಮನೆ ಮಾಡಿದ್ದ ಆತಂಕ ದೂರವಾಗಿದೆ.
ಹುಲಿಯ ಸಫಾರಿ ವಲಯದಲ್ಲೂ ಕಾಣಿಸಿಕೊಳ್ಳುತ್ತಿತ್ತು. ಇದೀಗ ಸೆರೆಹಿಡಿದು ಕಾಡಿಗೆ ಬಿಡಲಾಗಿದೆ ಎಂದು ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.