ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನ ಅಂತರಸಂತೆಯಿಂದ ನೂರಲಕುಪ್ಪೆ, ಚಿಲ್ಲರೆ ಮರದ ತಿಟ್ಟು, ಮಚ್ಚರೆ, ರಾಮೇನಹಳ್ಳಿ, ಆನಗಟ್ಟಿ ಗ್ರಾಮಗಳಿಗೆ ತೆರಳಲು ವಿದ್ಯಾರ್ಥಿಗಳು ಪರಿಪಾಟಲು ಅನುಭವಿಸುತ್ತಿದ್ದು, ಬಸ್ ವ್ಯವಸ್ಥೆ ಇಲ್ಲದೇ ತೀವ್ರ ಪರದಾಟ ನಡೆಸುತ್ತಿದ್ದಾರೆ. ಬಸ್‌ಗಾಗಿ ಗಂಟೆಗಟ್ಟಲೆ ಕಾಯಬೇಕಾದ ಅನಿವಾರ್ಯತೆ ಎದುರಾಗಿದ್ದು, ಶಾಲಾ ವಿದ್ಯಾರ್ಥಿಗಳ ಗೋಳನ್ನು ಹೇಳೊರಿಲ್ಲ ಕೇಳೊರಿಲ್ಲ ಎನ್ನುವಂತಾಗಿದೆ.
ಸಂಜೆ 4-30ಕ್ಕೆ ಶಾಲೆ ಬಿಟ್ಟರೆ ಮನೆಗೆ ತೆರಳಲು ಗಂಟೆಗಟ್ಟಲೆ ಬಸ್‌ಗೆ ಕಾದು ನಿಲ್ಲುವ ಪರಿಸ್ಥಿತಿ ಎದುರಾಗಿದೆ. ಕಿಲೋ ಮೀಟರ್ ಗಟ್ಟಲೆ ನಡೆದು ಊರು ಸೇರೋಣ ಎಂದರೆ ಕಾಡು ಪ್ರಾಣಿಗಳ ಕಾಟ ಕೂಡ ಜಾಸ್ತಿಯಾಗಿದ್ದು, ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ ತೆರಳಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಈ ಬಗ್ಗೆ ಮಾತನಾಡಿರುವ ವಿದ್ಯಾರ್ಥಿಗಳು, ನಾವು ಶಾಲೆಗೆ ಹೋಗಲು ಸರಿಯಾದ ಬಸ್ ಸೌಕರ್ಯ ಇಲ್ಲದ ಪರಿಣಾಮ ಬೈಕ್ ಹಾಗೂ ಆಟೋಗಳಲ್ಲಿ ಹೋಗುತ್ತಿದ್ದೇವೆ. ಆಟೋಗಳು ಕೂಡ ಸರಿಯಾದ ಸಮಯಕ್ಕೆ ಬರಲ್ಲ. ಓದಲೂ ಆಸಕ್ತಿ ಇದ್ದರೂ ಬಸ್ ತೊಂದರೆಯಿಂದ ಶಾಲೆಯೇ ಬೇಡ ಅನ್ನಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…
ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…