ಎಚ್.ಡಿ.ಕೋಟೆ: ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ರೈತರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಎರಡು ಕುರಿಗಳನ್ನು ಕೊಂದು ಹಾಕಿರುವ ಘಟನೆ ನಡೆದಿದೆ.
ಗ್ರಾಮದ ರೈತ ನಿಕೋಲಾಸ್ ರಾಜ್ ಎಂಬವರ ಮನೆುಂಲ್ಲಿ ಎರಡು ಮೂರು ಕುರಿಗಳನ್ನು ಸಾಕಲಾಗಿತ್ತು. ಜಮೀನಿನಲ್ಲಿ ಕುರಿ ಮತ್ತು ಹಸುಗಳನ್ನು ಮೇಯಿಸಿಕೊಂಡು ಬಂದು ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದರು. ಗುರುವಾರ ಮಧ್ಯರಾತ್ರಿ ಚಿರತೆ ಬಂದು ಕುರಿಗಳ ಮೇಲೆ ದಾಳಿ ನಡೆಸಿ ಒಂದು ಕುರಿಯನ್ನು ಕೊಂದು, ರಕ್ತ ಕುಡಿದು ಮತ್ತೊಂದು ಕುರಿಯನ್ನು ಹೊತ್ತೊಯ್ದಿದೆ.
ಚಿರತೆಯ ಆರ್ಭಟ ಮತ್ತು ದನ, ಕುರಿಗಳ ಕಿರುಚಾಟದಿಂದ ನಿವಾಸಿಗಳು ಆತಂಕಗೊಂಡು ಜೋರಾಗಿ ಚೀರಾಟ ನಡೆಸಿದ್ದರಿಂದ ಚಿರತೆ ಅಲ್ಲಿಂದ ಕಾಲ್ಕಿತ್ತಿದೆ.
ಬೆಳಿಗ್ಗೆ ಅರಣ್ಯ ಅಧಿಕಾರಿಗಳಿಗೆ ವಿಚಾರ ತಿಳಿಸಿದಾಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್ ಚಿತ್ರಕ್ಕೂ ಪೈರಸಿ…
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…
ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…
ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…
ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಕಾಂಗ್ರೆಸ್ ಸರ್ಕಾರದ…