ಮೈಸೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಆಷಾಢ ಶುಕ್ರವಾರದಂದು ಕುಟುಂಬ ಸಮೇತವಾಗಿ ಶ್ರೀ ಚಾಮುಂಡೇಶ್ವರಿ ದರ್ಶನ ಪಡೆದರು.
ತಮ್ಮ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ, ಸೊಸೆ ರೇವತಿ ನಿಖಿಲ್ ಕುಮಾರಸ್ವಾಮಿ ಹಾಗೂ ಮೊಮ್ಮಗ ಅವ್ಯಾನ್ ದೇವ್ ಅವರೊಂದಿಗೆ ಕೇಂದ್ರ ಸಚಿವರು ದರ್ಶನ ಮಾಡಿಕೊಂಡರು.
ಕುಟುಂಬ ಸಮೇತವಾಗಿ ಶ್ರೀ ಚಾಮುಂಡೇಶ್ವರಿಯ ದರ್ಶನ ಪಡೆದು ಕೃತಾರ್ಥನಾದೆ. ಸರ್ವರಿಗೂ ಶುಭವಾಗಲಿ ಹಾಗೂ ಎಲ್ಲೆಡೆ ಸುಖ ಶಾಂತಿ, ನೆಮ್ಮದಿ ಸಮೃದ್ಧಿ ನೆಲೆಸಲಿ ಎಂದು ದೇವರಲ್ಲಿ ಭಕ್ತಿಪೂರ್ವಕವಾಗಿ ಅರಿಕೆ ಮಾಡಿಕೊಂಡೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಮಾಜಿ ಸಚಿವರಾದ ಸಾ.ರಾ. ಮಹೇಶ್, ಶಾಸಕರಾದ ಜಿ.ಡಿ. ಹರೀಶ್ ಗೌಡ, ಮಂಜೇಗೌಡ, ವಿವೇಕಾನಂದ, ಮಾಜಿ ಶಾಸಕ ಅಶ್ವಿನ್ ಕುಮಾರ್, ಮಾಜಿ ಮೇಯರ್ ಚಿನ್ನಿ ರವಿ ಮುಂತಾದವರು ಕೇಂದ್ರ ಸಚಿವರ ಜತೆಯಲ್ಲಿದ್ದರು.





