ಮೈಸೂರು : ಮುಖ್ಯಮಂತ್ರಿ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಬೆಳಕಿಗೆ ಬಂದಿದೆ ಎಂದು ಕೇಂದ್ರ ಸಚಿವ ಎಸ್.ಡಿ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಮುಡಾ ಹಗರಣ ಬಯಲಿಗೆ ಬಂದ ವಿಚಾರಕ್ಕೆ ಸಂಬಂಧಪಟ್ಟಂತೆ ನಗರದ ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಡಿ ಪ್ಯಾಕ್ಟರಿ ಬಂದ್ ಆಯ್ತು, ಈಗ ಮುಡಾ ಫ್ಯಾಕ್ಟರಿ ಶುರು ಆಗಿದೆ. ಅವರ ಪಕ್ಷದ ಅಧ್ಯಕ್ಷರೇ ಮುಡಾ ಹಗರಣ ಹೊರತಂದಿದ್ದಾರೆ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಟೀಕಿಸಿದ್ದಾರೆ.
ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ಮತು ಹೇಗೆ..? ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್ ನವರೇ ಒಳಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. ೬೩ ಕೋಟಿ. ರೂ ಪರಿಹಾರ ಕೇಳುವ ಸಿಎಂ, ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಸವಾಲು ಹಾಕಿದರು.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…