ಮೈಸೂರು

ತನ್ನಿಷ್ಟದಂತೆ ಲೋಕ ವರದಿ ಬರೆಸಿದ ಸಿಎಂ: ಎಚ್‌ಡಿಕೆ ಆರೋಪ

ಮೈಸೂರು: ಸರ್ಕಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವತು ತಮಗೆ ಇಷ್ಟಬಂದಂತೆ, ಅನುಕೂಲವಾಗುವಂತೆ ಲೋಕಾಯುಕ್ತ ವರದಿಯನ್ನು ಬರೆಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಏನೆಲ್ಲಾ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ. ಕಾರಣ, ಪ್ರತಿ ಹಂತದಲ್ಲಿಯೂ ಸರ್ಕಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದೆ ಎಂದು ದೂರಿದರು.

ಈ ವಿಚಾರ ಪ್ರಸ್ತಾಪ ಮಾಡಿದ್ದಕ್ಕೆ ನಮಗೆ ಕಿರುಕುಳ ನೀಡಲಾಗುತ್ತಿದೆ. ನಮ್ಮ ಜಮೀನು ತನಿಖೆಗೆ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಲಾಗಿದೆ. ಐವರು ಐಎಎಸ್ ಅಧಿಕಾರಿಗಳನ್ನು ಎಸ್‌ಐಟಿಗೆ ನೇಮಕ ಮಾಡಿದ್ದಾರೆ ಎಂದು ಕಟುವಾಗಿ ಟೀಕಿಸಿದರು.

೪೦ ವರ್ಷಗಳ ಹಿಂದೆ ನಾನು ಮೈಸೂರಿನಲ್ಲಿ ಸಿನಿಮಾ ಹಂಚಿಕೆದಾರನಾಗಿದ್ದಾಗ ಕಷ್ಟಪಟ್ಟು ಸಂಪಾದನೆ ಮಾಡಿದ ಜಮೀನು ಅದಾಗಿದೆ. ೧೪ ಎಕರೆ ಒತ್ತುವರಿಯಾಗಿದೆ ಎಂದು ಆರೋಪ ಮಾಡಿದ್ದಾರೆ. ನಾನು ಹಿಂದೆಯೇ ಅವರಿಗೆ ಪತ್ರ ಬರೆದು, ಸರ್ವೇ ಮಾಡಿಕೊಳ್ಳಿ, ಒತ್ತುವರಿ ಆಗಿದ್ದರೆ ವಾಪಸ್ ಪಡೆದುಕೊಳ್ಳಿ ಎಂದು ಹೇಳಿದ್ದೇನೆ. ತನಿಖೆ ನಡೆಸಿ ವಶಕ್ಕೆ ತೆಗೆದುಕೊಳ್ಳಿ ಎಂದು ಪತ್ರವನ್ನೇ ಬರೆದಿದ್ದೆ. ಆದರೆ, ನನ್ನ ಮನವಿ ಅಲಕ್ಷ್ಯ ಮಾಡಿ ೪೦ ವರ್ಷಗಳಿಂದ ನನಗೆ ಕಿರುಕುಳ ನೀಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

50 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

51 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

53 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

56 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

1 hour ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago