ಮೈಸೂರು

ಹೃದಯಾಘಾತ : ಆತಂಕ ಬೇಡ ಎಂದ ಜಯದೇವ ನಿರ್ದೇಶಕ ಸದಾನಂದ

ಮೈಸೂರು : ಸಣ್ಣಪುಟ್ಟ ಎದೆನೋವಿಗೆ ಆತಂಕಕ್ಕೊಳಗಾಗಿ ಹೃದ್ರೋಗ ಆಸ್ಪತ್ರೆಗೆ ಆಗಮಿಸುವ ಅಗತ್ಯವಿಲ್ಲ ಎಂದು ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಕೆ.ಎಸ್.ಸದಾನಂದ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಾಸನದಲ್ಲಿ ಸರಣಿ ಹೃದ್ರೋಗ ಪ್ರಕರಣಗಳ ಹಿನ್ನೆಲೆಯಲ್ಲಿ ಆತಂಕಗೊಂಡ ಜನ ತಪಾಸಣೆಗೆ ಬರುವವರ ಸಂಖ್ಯೆ ಹೆಚ್ಚಿದೆ. ಸಣ್ಣಪುಟ್ಟ ಸಮಸ್ಯೆಗಳಿಗೂ ಬರುವವರ ಸಂಖ್ಯೆ ಅಧಿಕವಾದಾಗ ತಪಾಸಣೆ ಮಾಡುವ ವೈದ್ಯರು ಸಿನಿಕತನಕ್ಕೆ ಒಳಗಾಗುತ್ತಾರೆ. ನಿಜವಾದ ರೋಗಿಯ ತಪಾಸಣೆಯ ಮೇಲೂ ಅದು ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದ್ದಾರೆ.

ಎದೆನೋವಿಗೆ ನಾನಾ ರೀತಿಯ ಕಾರಣಗಳಿರಬಹುದು. ಎಲ್ಲವೂ ಹೃದಯದ ಸಮಸ್ಯೆ ಎಂದೇ ಭಾವಿಸಬೇಕಿಲ್ಲ. ಇಸಿಜಿ ಅಥವಾ ಟ್ರೊಪೊನಿನ್ ಎಂಬ ಸಣ್ಣ ರಕ್ತ ಪರೀಕ್ಷೆಯಿಂದ ಹೃದಯ ಸಮಸ್ಯೆ ಬಗ್ಗೆ ನಿರ್ಧರಿಸಬಹುದು. ಅಲ್ಲಿ ತೊಂದರೆ ಇದ್ದರೆ ಮಾತ್ರ ತಜ್ಞವೈದ್ಯರ ಬಳಿ ಬಂದರೆ ಆಗ ಚಿಕಿತ್ಸೆ ನೀಡಲು ಸುಲಭವಾಗುತ್ತದೆ. ನೇರವಾಗಿ ಜಯದೇವ ಸಂಸ್ಥೆಗೆ ಬಂದರೆ ಎಲ್ಲರನ್ನೂ ತಪಾಸಣೆಗೊಳಪಡಿಸಲು ಕಷ್ಟ ಎಂದರು.

ಹಾಸನ ಜಿಲ್ಲೆಯಲ್ಲಿ ಮಾತ್ರ ಈ ಸಮಸ್ಯೆ ಇಲ್ಲ. ಎಲ್ಲಾ ಕಡೆ ಇದೆ. ರೆಫರಲ್ ಕೇಂದ್ರಗಳಲ್ಲಿ ಎಕೊ, ಟಿಎಂಟಿಯಂತಹ ಸೌಲಭ್ಯಗಳನ್ನು ಅಳವಡಿಸುವ ಮೂಲಕ ಪ್ರಾಥಮಿಕ ಹಂತದಲ್ಲೇ ತಪಾಸಣೆಯನ್ನು ಸರಳೀಕರಿಸಲು ಸಾಧ್ಯವಿದೆ. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕು. ಸಾಮಾನ್ಯವಾಗಿ ಮೈಸೂರಿನಲ್ಲಿ 700 ಜನರ ತಪಾಸಣೆ ನಡೆಯುತ್ತಿತ್ತು. ಈಗ 1000 ಮಂದಿಯ ತಪಾಸಣೆ ಮಾಡುತ್ತಿದ್ದೇವೆ. ಆದರೂ ಸಾಲುತ್ತಿಲ್ಲ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

3 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

7 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

20 mins ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

27 mins ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

3 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

3 hours ago