ಮೈಸೂರು : ಔಷಧಿ ಕೊಳ್ಳಲು ಮೆಡಿಕಲ್ ಸ್ಟೋರ್‌ಗೆ ಹೋಗಿದ್ದಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಕ್ಯಾತಮಾರನಹಳ್ಳಿಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಜಗದೀಶ್ (38) ಮೃತ ವ್ಯಕ್ತಿ. ಉದಯಗಿರಿಯ ಮೆಡಿಕಲ್ ಸ್ಟೋರ್‌ಗೆ ಔಷಧಿ ಕೊಳ್ಳಲು ಹೋಗಿದ್ದಾಗ ಜಗದೀಶ್ ಏಕಾಏಕಿ ಕುಸಿದು ಬಿದ್ದಿದ್ದಾರೆ. ಇದಕ್ಕೆ ಸಂಬಂಧಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಜಗದೀಶ್ ಮೆಡಿಕಲ್ ಸ್ಟೋರ್‌ಗೆ ಔಷಧಿ ಕೊಳ್ಳಲು ಬಂದಿದ್ದರು. ಜಗದೀಶ್ ನೋವಿನ ಹಿನ್ನೆಲೆ ತಮ್ಮ ಎದೆಗೆ ಕೈಹಿಡಿದುಕೊಂಡು ಬಂದಿರುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಮೆಡಿಕಲ್ ಸಿಬ್ಬಂದಿ ಜಗದೀಶ್ ಅವರನ್ನು ವಿಚಾರಿಸುತ್ತಿದ್ದ ವೇಳೆಯೇ ಏಕಾಏಕಿ ಕುಸಿದು ಬಿದ್ದಿದ್ದಾರೆ.
ತಕ್ಷಣ ಮೆಡಿಕಲ್ ಸಿಬ್ಬಂದಿ ಜಗದೀಶ್ ಕಡೆಗೆ ಓಡಿ ಹೋಗಿ ಅವರನ್ನು ಎಬ್ಬಿಸಲು ಪ್ರಯತ್ನಿಸಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಜಗದೀಶ್ ಪ್ರಾಣಪಕ್ಷಿ ಹಾರಿಹೋಗಿದೆ. ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…