ಹುಣಸೂರು: ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಕಳೆದ ರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.
ಕಳೆದ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದ ಹುಣಸೂರಿನ ನಂದಿನಿ ಬಡಾವಣೆಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ರಾತ್ರಿಯಿಡೀ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಒಳಚರಂಡಿ ನೀರು ಹಾಗೂ ಮಳೆ ನೀರು ಎರಡೂ ಕೂಡ ಮನೆಗಳಿಗೆ ನುಗ್ಗಿದ ಪರಿಣಾಮ ನಿವಾಸಿಗಳು ಮೂಗುಮುಚ್ಚಿಕೊಂಡು ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಇದನ್ನೂ ಓದಿ:- ಇಂಗ್ಲಿಷ್ ಕಾಲುವೆ ಈಜಿದ ಅವಳಿ ಮಕ್ಕಳ ತಾಯಿ ತನ್ವಿ
ವಿಷಯ ತಿಳಿದು ಇಂದು ಬೆಳಿಗ್ಗೆ ಶಾಸಕ ಜಿ.ಡಿ.ಹರೀಶ್ ಗೌಡ ಅವರು, ಸ್ಥಳಕ್ಕೆ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿ, ಒಳಚರಂಡಿ ಹಾಗೂ ರಸ್ತೆ ದುರಸ್ತಿ ಮಾಡುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.




