ಮೈಸೂರು

ಹುಣಸೂರಿನಲ್ಲಿ ಅಬ್ಬರಿಸಿ, ಬೊಬ್ಬಿರಿದ ಮಳೆರಾಯ: ಮನೆಗಳಿಗೂ ನುಗ್ಗಿದ ಮಳೆ ನೀರು

ಹುಣಸೂರು: ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಕಳೆದ ರಾತ್ರಿ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.

ಕಳೆದ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದ ಹುಣಸೂರಿನ ನಂದಿನಿ ಬಡಾವಣೆಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ರಾತ್ರಿಯಿಡೀ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಒಳಚರಂಡಿ ನೀರು ಹಾಗೂ ಮಳೆ ನೀರು ಎರಡೂ ಕೂಡ ಮನೆಗಳಿಗೆ ನುಗ್ಗಿದ ಪರಿಣಾಮ ನಿವಾಸಿಗಳು ಮೂಗುಮುಚ್ಚಿಕೊಂಡು ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇದನ್ನೂ ಓದಿ:- ಇಂಗ್ಲಿಷ್ ಕಾಲುವೆ ಈಜಿದ ಅವಳಿ ಮಕ್ಕಳ ತಾಯಿ ತನ್ವಿ 

ವಿಷಯ ತಿಳಿದು ಇಂದು ಬೆಳಿಗ್ಗೆ ಶಾಸಕ ಜಿ.ಡಿ.ಹರೀಶ್‌ ಗೌಡ ಅವರು, ಸ್ಥಳಕ್ಕೆ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿ, ಒಳಚರಂಡಿ ಹಾಗೂ ರಸ್ತೆ ದುರಸ್ತಿ ಮಾಡುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

3 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

3 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

3 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

3 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

3 hours ago