ಮೈಸೂರು

ಮೈಸೂರು | ಮಳೆಗೆ ಜನ ಜೀವನ ಅಸ್ತವ್ಯಸ್ತ

ಮೈಸೂರು : ನಗರದಲ್ಲಿ ಬುಧವಾರ ಮಧ್ಯಾಹ್ನ ಮಳೆ ಧಿಢೀರ್‌ ಬಂದ ಕಾರಣ ಜನ ಜೀವನ ಅಸ್ತವ್ಯಸ್ತವಾಗಿತ್ತು.

ನಗರದ ಹಲವೆಡೆ ಭಾರೀ ಮಳೆಗೆ ರಸ್ತೆಯಲ್ಲೇ ಮಳೆ ನೀರು ನಿಂತು ವಾಹನ ಸವಾರರು ಪರಾದಾಡಿದರು.

ಮಾರ್ಕೆಟ್‌ಗೆ ಬಂದವರ ಪರದಾಟ ;
ದೇವರಾಜ ಮಾರುಕಟ್ಟೆಗೆ ಬಂದ ಸಾರ್ವಜನಿಕರು ಪರದಾಡಿದರು, ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ಹೂವು, ಹಣ್ಣು ವ್ಯಾಪಾರಸ್ಥರು ಕಷ್ಟಕ್ಕೀಡಾಗಿದ್ದು, ಮಳೆಯಿಂದಾಗಿ ವ್ಯಾಪಾರವಿಲ್ಲದೇ ದಿಕ್ಕು ತೋಚದಂತಾಗಿದ್ದಾರೆ.

ಟ್ರಾಫಿಕ್ ಜಾಮ್ ;
ಮಳೆಯ ಪರಿಣಾಮ ದೈನಂದಿನ ಕೆಲಸ ಕಾರ್ಯಗಳಿಗೆ ಹೋಗುವವರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಾಕಷ್ಟು ಪರದಾಟ ನಡೆಸಿದರು. ಕೆ.ಆರ್.ವೃತ್ತ, ಸಯ್ಯಾಜಿ ರಾವ್ ರಸ್ತೆ, ಅಗ್ರಹಾರ ವೃತ್ತ, ಸಿದ್ದಪ್ಪ ವೃತ್ತ, ಆರ್‌ಟಿಓ ವೃತ್ತ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ರಸ್ತೆಯಲ್ಲೇ ಮಳೆ ನೀರು ನಿಂತು ವಾಹನ ಸವಾರರು ಸಂಚರಿಸಲು ಸಾಧ್ಯವಾಗದೇ ಟ್ರಾಫಿಕ್ ಜಾಮ್ ಸಹ ಉಂಟಾಗಿತ್ತು. ಇನ್ನೂ ಕೆಲವು ಕಡೆ ಚರಂಡಿ ನೀರು ಹಾಗೂ ಮಳೆ ನೀರು ಸೇರಿ ರಸ್ತೆಯ ಮೇಲೆಯೇ ಹರಿಯುತ್ತಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.

ಸಾಧಾರಣ ಮಳೆ ;
ನಗರದ ವಿವಿಧ ಬಡಾವಣೆಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಸುರಿದರೆ ಕೆಲವೆಡೆ ತುಸು ಹೆಚ್ಚಾಗಿಯೇ ಸುರಿಯಿತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಯಂತೆ ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಜೂ.11ರಿಂದ 15ರವರೆಗೆ ಮೋಡ ಕವಿದ ವಾತಾವರಣ ದೊಂದಿಗೆ ತುಂತುರುವಿನಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

28 mins ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

2 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

2 hours ago

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

3 hours ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

3 hours ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

4 hours ago