ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜಿಟಿ ಜಿಟಿ ಮಳೆಗೆ ಜನರು ಹೈರಾಣಾಗಿದ್ದು, ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಜಿಟಿ ಜಿಟಿ ಮಳೆಯಿಂದ ದಿನ ನಿತ್ಯ ಕೆಲಸ ಕಾರ್ಯಗಳಿಗೆ ಹೋಗಲು ಜನತೆ ಪರದಾಡುತ್ತಿದ್ದು, ಪಾದಚಾರಿಗಳ ಗೋಳು ಹೇಳತೀರದಾಗಿದೆ.
ಕಳೆದ ಮೂರು ದಿನಗಳಿಂದಲೂ ಮೈಸೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಬೆಳಿಗ್ಗೆಯಂತೂ ಜಿಟಿ ಜಿಟಿ ಮಳೆಯಿಂದ ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಜನ ಸಾಮಾನ್ಯರು ತೀವ್ರ ಪರದಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ:- ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.





