ಮೈಸೂರು

ಮೈಸೂರು | ಧಾರಕಾರ ಮಳೆಗೆ ಧರೆಗುರುಳಿದ ಮರ ; ಸಂಚಾರ ಅಸ್ತವ್ಯಸ್ತ

ಮೈಸೂರು : ನಗರದಲ್ಲಿ ಗುರುವಾರ ಸಂಜೆ ವೇಳೆಗೆ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಜನ ಸಂಕಷ್ಟ ಅನುಭವಿಸಿದರು.

ಮಧ್ಯಾಹ್ನವೆಲ್ಲಾ ಸುಡು ಬಿಸಿಲಿದ್ದು, ಸಂಜೆಯಾಗುತ್ತಿದ್ದಂತೆ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯಿತು. ಇದರಿಂದ ಜನ ಜೀವನ ಅಸ್ತವ್ಯಸ್ತವಾಗಿತ್ತು.

ನಗರದ ದೇವರಾಜ ಮೊಹಲ್ಲಾದ ಗಾಯಿತ್ರಿ ಭವನ್ ಬಳಿ ಮರವೊಂದು ಧರೆಗುರುಳಿದೆ. ಸುಮಾರು ಒಂದು ಗಂಟೆ ಕಾಲ ಸುರಿದ ಮಳೆಗೆ ಹಲವೆಡೆ ರಸ್ತೆಗೆ ಅಡ್ಡಲಾಗಿ ಮರಗಳು ಬಿದ್ದಿರುವ ದೃಶ್ಯ ಸಾಮಾನ್ಯವಾಗಿತ್ತು. ವಾಹನ ಸಂಚಾರವೂ ಸಂಪೂರ್ಣ ಅಸ್ತವ್ಯಸ್ತವಾಗಿತ್ತು

ಭಾರಿ ಪ್ರಮಾಣದ ಮಳೆಗೆ ನಗರದ ಪ್ರಮುಖ ರಸ್ತೆಯಲ್ಲೆಲ್ಲಾ ನೀರು ತುಂಬಿತ್ತು. ಬಸ್‌ ನಿಲ್ದಾಣದ ಹತ್ತಿರ ರಸ್ತೆ ಮೇಲೆ ಮಳೆ ನೀರು ಸಂಗ್ರಹವಾಗಿ ವಾಹನ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

ಆಂದೋಲನ ಡೆಸ್ಕ್

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

19 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

19 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

20 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

20 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

20 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

21 hours ago