ನಂಜನಗೂಡು: ಕಳೆದ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಅನೇಕ ಬೃಹತ್ ಗಾತ್ರದ ಮರಗಳು ಧರೆಗುರುಳಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಕಳೆದ ತಡರಾತ್ರಿ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಭಾರೀ ಮಳೆಯಿಂದ ರಸ್ತೆಗಳಲ್ಲೇ ಬೃಹತ್ ಗಾತ್ರದ ಮರಗಳು ಧರಶಾಯಿಯಾಗಿದ್ದು, ಇಂದು ಬೆಳಿಗ್ಗೆ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಇದನ್ನೂ ಓದಿ:- ಕೊಡಗಿನಲ್ಲಿ ರಾತ್ರಿ ಸುರಿದ ಮಳೆಗೆ ಭಾರೀ ಅವಾಂತರ
ನಂಜನಗೂಡು ಕೆ.ಎಚ್.ಬಿ ಕಾಲೋನಿಯ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಇನ್ನು ಧಾರಾಕಾರ ಮಳೆಯಿಂದ ರೈತರ ಹಲವು ಬೆಳೆಗಳು ಸಂಪೂರ್ಣ ಹಾಳಾಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಬೆಳೆ ನಾಶದಿಂದ ಕಂಗಾಲಾಗಿರುವ ರೈತರು ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ:- ನಂಜನಗೂಡು: ನಂಜುಂಡೇಶ್ವರಸ್ವಾಮಿ ದೇವಸ್ಥಾನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭೇಟಿ



