ಮೈಸೂರು

ನಂಜನಗೂಡಿನಲ್ಲಿ ಸುರಿದ ಧಾರಾಕಾರ ಮಳೆ: ಧರೆಗುರುಳಿದ ಬೃಹತ್‌ ಗಾತ್ರದ ಮರಗಳು

ನಂಜನಗೂಡು: ಕಳೆದ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಅನೇಕ ಬೃಹತ್‌ ಗಾತ್ರದ ಮರಗಳು ಧರೆಗುರುಳಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಕಳೆದ ತಡರಾತ್ರಿ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಭಾರೀ ಮಳೆಯಿಂದ ರಸ್ತೆಗಳಲ್ಲೇ ಬೃಹತ್‌ ಗಾತ್ರದ ಮರಗಳು ಧರಶಾಯಿಯಾಗಿದ್ದು, ಇಂದು ಬೆಳಿಗ್ಗೆ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇದನ್ನೂ ಓದಿ:- ಕೊಡಗಿನಲ್ಲಿ ರಾತ್ರಿ ಸುರಿದ ಮಳೆಗೆ ಭಾರೀ ಅವಾಂತರ

ನಂಜನಗೂಡು ಕೆ.ಎಚ್.ಬಿ ಕಾಲೋನಿಯ ಮುಖ್ಯ‌ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್‌ ಯಾವುದೇ ಅಪಾಯ ಸಂಭವಿಸಿಲ್ಲ.

ಇನ್ನು ಧಾರಾಕಾರ ಮಳೆಯಿಂದ ರೈತರ ಹಲವು ಬೆಳೆಗಳು ಸಂಪೂರ್ಣ ಹಾಳಾಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಬೆಳೆ ನಾಶದಿಂದ ಕಂಗಾಲಾಗಿರುವ ರೈತರು ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ:- ನಂಜನಗೂಡು: ನಂಜುಂಡೇಶ್ವರಸ್ವಾಮಿ ದೇವಸ್ಥಾನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭೇಟಿ

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

2 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

2 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

4 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

6 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

10 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

10 hours ago