ಮೈಸೂರು: ಹವಾಮಾನ ವೈಪರಿತ್ಯದಿಂದಾಗಿ ರಾಜ್ಯಾದ್ಯಂತ ಭಾರೀ ಮಳೆ ಸುರಿದಿದೆ. ಅದರಲ್ಲೂ ಕೊಡಗು, ಮೈಸೂರು, ಚಾಮರಾಜಗರ ಜಿಲ್ಲೆಗಳಲ್ಲಿ ಮುಂಗಾರು ನಿರೀಕ್ಷೆಗೂ ಮೀರಿ ಉತ್ತಮ ಮಳೆ ನೀಡುವ ಮುನ್ಸೂಚನೆ ನೀಡಿದೆ.
ಇದರ ಜೊತೆಗೆ ಮೈಸೂರಿನಲ್ಲಿ ವಿಪರೀತ ಮಳೆಯಿಂದಾಗಿ ಅಪಾರ ಹಾನಿ ಉಂಟಾಗಿದ್ದು, ಈ ಬಗ್ಗೆ ನಗರದಲ್ಲಿಂದು (ಶುಕ್ರವಾರ, ಮೇ.24) ಮಳೆ ಸಂಬಂಧ ಮಾಧ್ಯಮಗಳ ಜತೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಮಾತನಾಡಿದ್ದಾರೆ.
ಮಳೆಯಿಂದಾಗಿ ಮೈಸೂರಿನ ಹಲವು ಭಾಗಗಳಲ್ಲಿ ಅಪಾರ ಹಾನಿಯಾಗಿದೆ. ತೋಟಗಾರಿಕೆ ಕೃಷಿಯಲ್ಲಿ ಈವರೆಗೆ ಸುಮಾರು 6900 ಎಕ್ಟೇರ್ ನಷ್ಟು ಹಾನಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮೈಸೂರಲ್ಲಿ 4 ಸಾವಿರ ಎಕ್ಟೇರ್ ಹಾನಿಯಾಗಿದೆ. ಅದರಲ್ಲಿ 6 ಮನೆಗಳು ಭಾಗಶಃ ನಾಶವಾಗಿದೆ. ಉಳಿದಂತೆ 60 ಗೋಡೆಗಳು ಕುಸಿದಿವೆ. ಮನೆ ಸಂಪೂರ್ಣವಾಗಿ ಬಿದ್ದು ಹೋಗಿರುವುದಕ್ಕೆ 50 ಸಾವಿರ ರೂ. ಪರಿಹಾರ ನೀಡಲಾಗಿದೆ. ಇನ್ನು ಗೋಡೆ ಕುಸಿತ ಉಂಟಾಗಿರುವುದಕ್ಕೆ 25 ಸಾವಿರ ರೂ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು.
ಇನ್ನು ಮಾಜಿ ಮುಖ್ಯಮಂತ್ರಿ ಅವರಿಗೆ ಪರೋಕ್ಷವಾಗಿ ತಿವಿದಿರುವ ಎಚ್.ಸಿ ಮಹದೇವಪ್ಪ. ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಠಿ ಬಗ್ಗೆ ಬೇಕಿದ್ದರೆ ಅವರು ಮಾತನಾಡಲಿ, ಅದು ಬಿಟ್ಟು ರಾಜಕೀಯಕ್ಕಾಗಿ ವಿಚಾರ ಮಾಡಲು ಮುಂದಾದರೇ ನನ್ನ ಬಳಿ ಉತ್ತರವಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಇಂದಿನಿಂದ ( ಡಿಸೆಂಬರ್ 20 ) ಮೂರು ದಿನಗಳ ಕಾಲ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…