ಮೈಸೂರು: ಏಪ್ರಿಲ್ 2 ರಿಂದ ರಾಜ್ಯದಲ್ಲಿ ಆಲಿಕಲ್ಲು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮೈಸೂರು, ಕೊಡಗು, ಮಂಡ್ಯ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ವಿಜಯಪುರ, ಹಾವೇರಿ, ಗದಗ ಸೇರಿದಂತೆ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಒಡಿಶಾದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದ. ಹೀಗಾಗಿ ರಾಜ್ಯದಲ್ಲಿ ಏ.2 ರಿಂದ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.