Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ರಾಜ್ಯದಲ್ಲಿ ಭರ್ಜರಿ ಮಳೆ ಹಿನ್ನೆಲೆ: ಮೈಸೂರು ಭಾಗದ ಜಲಾಶಯಗಳ ಒಳಹರಿವು ಹೆಚ್ಚಳ

ಮೈಸೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಭಾಗದ ಜಲಾಶಯಗಳ ಒಳಹರಿವು ಹೆಚ್ಚಾಗಿದೆ.

ಹಳೆ ಮೈಸೂರು ಭಾಗದ ಪ್ರಮುಖ ಜಲಾಶಯಗಳಲ್ಲಿ ಒಳಹರಿವಿನ ಜೊತೆಗೆ ಹೊರಹರಿವಿನಲ್ಲಿ ಭಾರೀ ಏರಿಕೆ ಆಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ಅನೇಕ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಳೆ ಮೈಸೂರು ಭಾಗದ ಪ್ರಮುಖ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ.

ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವು 2000 ಕ್ಯೂಸೆಕ್ಸ್‌ ಹೆಚ್ಚಳವಾಗಿದ್ದು, ಹೊರಹರಿವನ್ನು 1000 ಕ್ಯೂಸೆಕ್ಸ್‌ಗೆ ಹೆಚ್ಚಳ ಮಾಡಲಾಗಿದೆ.

ಇನ್ನೂ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್ ಜಲಾಶಯದ ಹೊರಹರಿವಿನ ಪ್ರಮಾಣದಲ್ಲೂ ಏರಿಕೆ ಮಾಡಲಾಗಿದೆ. ಸದ್ಯದ ಒಳಹರಿವು 1279 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಹೊರಹರಿವನ್ನು 984 ಕ್ಯೂಸೆಕ್ಸ್‌ಗಳಿಗೆ ಏರಿಕೆ ಮಾಡಲಾಗಿದೆ.

ರಾಜ್ಯದಲ್ಲಿ ಮಳೆ ಹೀಗೆಯೇ ಮುಂದುವರಿದರೆ ಎರಡೂ ಜಲಾಶಯಗಳು ಭರ್ತಿಯಾಗಲಿದ್ದು, ಜಲಾಶಯದಿಂದ ಹೊರಹರಿವನ್ನೂ ಕೂಡ ಜಾಸ್ತಿ ಮಾಡಲಾಗುತ್ತದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಜಲಾಶಯಗಳು ಭರ್ತಿಯತ್ತ ಸಾಗುತ್ತಿರುವುದರಿಂದ ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದ್ದು, ಈ ಬಾರಿಯಾದರೂ ನಾಲೆಗಳ ನೀರನ್ನು ನಂಬಿ ಹೆಚ್ಚು ಹೆಚ್ಚು ಬೆಳೆ ಬೆಳೆಯಬಹುದು ಎಂದು ಅಂದಾಜಿಸಿದ್ದಾರೆ.

Tags: