ಮೈಸೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಭಾಗದ ಜಲಾಶಯಗಳ ಒಳಹರಿವು ಹೆಚ್ಚಾಗಿದೆ.
ಹಳೆ ಮೈಸೂರು ಭಾಗದ ಪ್ರಮುಖ ಜಲಾಶಯಗಳಲ್ಲಿ ಒಳಹರಿವಿನ ಜೊತೆಗೆ ಹೊರಹರಿವಿನಲ್ಲಿ ಭಾರೀ ಏರಿಕೆ ಆಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯದ ಅನೇಕ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಳೆ ಮೈಸೂರು ಭಾಗದ ಪ್ರಮುಖ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ.
ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವು 2000 ಕ್ಯೂಸೆಕ್ಸ್ ಹೆಚ್ಚಳವಾಗಿದ್ದು, ಹೊರಹರಿವನ್ನು 1000 ಕ್ಯೂಸೆಕ್ಸ್‌ಗೆ ಹೆಚ್ಚಳ ಮಾಡಲಾಗಿದೆ.
ಇನ್ನೂ ಮಂಡ್ಯ ಜಿಲ್ಲೆಯ ಕೆ.ಆರ್.ಎಸ್ ಜಲಾಶಯದ ಹೊರಹರಿವಿನ ಪ್ರಮಾಣದಲ್ಲೂ ಏರಿಕೆ ಮಾಡಲಾಗಿದೆ. ಸದ್ಯದ ಒಳಹರಿವು 1279 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಹೊರಹರಿವನ್ನು 984 ಕ್ಯೂಸೆಕ್ಸ್‌ಗಳಿಗೆ ಏರಿಕೆ ಮಾಡಲಾಗಿದೆ.
ರಾಜ್ಯದಲ್ಲಿ ಮಳೆ ಹೀಗೆಯೇ ಮುಂದುವರಿದರೆ ಎರಡೂ ಜಲಾಶಯಗಳು ಭರ್ತಿಯಾಗಲಿದ್ದು, ಜಲಾಶಯದಿಂದ ಹೊರಹರಿವನ್ನೂ ಕೂಡ ಜಾಸ್ತಿ ಮಾಡಲಾಗುತ್ತದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಜಲಾಶಯಗಳು ಭರ್ತಿಯತ್ತ ಸಾಗುತ್ತಿರುವುದರಿಂದ ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದ್ದು, ಈ ಬಾರಿಯಾದರೂ ನಾಲೆಗಳ ನೀರನ್ನು ನಂಬಿ ಹೆಚ್ಚು ಹೆಚ್ಚು ಬೆಳೆ ಬೆಳೆಯಬಹುದು ಎಂದು ಅಂದಾಜಿಸಿದ್ದಾರೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…