ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಮತ್ತೆ ಮುಂದುವರಿದಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ.
ಜಲಾಶಯದ ಇಂದಿನ ಒಳಹರಿವು 25,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವನ್ನು 30,000 ಕ್ಯೂಸೆಕ್ಸ್‌ಗೆ ಏರಿಕೆ ಮಾಡಲಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 83 ಅಡಿಗಳಾಗಿದೆ.
ಜಲಾಶಯದಿಂದ ಹೊರಹರಿವು 30,000 ಕ್ಯೂಸೆಕ್ಸ್‌ಗಳಾಗಿರುವುದರಿಂದ ಕಪಿಲಾ ನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ಉಲ್ಬಣವಾಗಿದೆ. ಇನ್ನು ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಡ್ಯಾಂ ಮುಂಭಾಗದ ಬೀಚನಹಳ್ಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕೂಡ ಮುಳುಗಡೆಯಾಗಿದೆ.
ಈ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ಬದಲಿ ರಸ್ತೆಯ ವ್ಯವಸ್ಥೆ ಮಾಡಲಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿ ಹೊರಹರಿವನ್ನು ಹೆಚ್ಚಳ ಮಾಡಿರುವುದರಿಂದ ಕಪಿಲಾ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದಾರೆ.
ಇನ್ನು ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಬಹಳ ಎಚ್ಚರಿಕೆಯಿಂದ ಇರುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇನ್ನು ಮಳೆ ಎರಡು ದಿನ ಮುಂದುವರಿಯಲಿದ್ದು, ಜಲಾಶಯದಿಂದ ಮತ್ತಷ್ಟು ನೀರನ್ನು ಹೊರಬಿಡುವ ಸಂಭವವಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…