ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದು, ಹೊರಹರಿವನ್ನು ಕೂಡ ಏರಿಕೆ ಮಾಡಲಾಗಿದೆ.
ಕೇರಳದ ವಯನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರುಮಾಡಿದ್ದಾನೆ. ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದು, ಹೊರಹರಿವನ್ನು ಏರಿಕೆ ಮಾಡಲಾಗಿದೆ.
ಜಲಾಶಯದ ಇಂದಿನ ಒಳಹರಿವು 17,000 ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು 25,000 ಕ್ಯೂಸೆಕ್ಸ್‌ಗಳಿಗೆ ಏರಿಕೆ ಮಾಡಲಾಗಿದೆ. ಕಬಿನಿ ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 82 ಅಡಿಗಳಾಗಿದೆ.
ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಹೊರಹರಿವನ್ನು 25,000 ಕ್ಯೂಸೆಕ್ಸ್‌ಗಳಿಗೆ ಏರಿಕೆ ಮಾಡಲಾಗಿದ್ದು, ಕಪಿಲಾ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನು ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸುರಕ್ಷತೆಯಿಂದ ಇರಬೇಕು. ಜಲಾಶಯದಿಂದ ಇನ್ನೂ ಹೆಚ್ಚಿನ ನೀರನ್ನು ಬಿಟ್ಟರೆ ತಮ್ಮ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆರಾಯ ಇದೀಗ ಮತ್ತೆ ತನ್ನ ರೌದ್ರಾವತಾರ ತಾಳಿದ್ದು, ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಪ್ರವಾಹ ಭೀತಿ ಎದುರಾಗುವ ಸಂಭವವಿದೆ.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…