ಹೆಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ.
ಕಳೆದ ಮೂರು ದಿನಗಳಿಂದ ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕಬಿನಿ ಜಲಾಶಯ ಭರ್ತಿಯತ್ತ ಸಾಗಿದೆ. ಜಲಾಶಯದ ಇಂದಿನ ಒಳಹರಿವು 6 ಸಾವಿರ ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು 1000 ಕ್ಯೂಸೆಕ್ಸ್‌ಗಳಿಗೆ ಏರಿಕೆ ಮಾಡಲಾಗಿದೆ.
ಮುಂಗಾರು ಶುರುವಾದ ನಂತರದಲ್ಲಿ ಮೊದಲ ಬಾರಿಗೆ ಜಲಾಶಯದ ಒಳಹರಿವು ಈ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ರೈತರ ಮೊಗದಲ್ಲಿ ಸಂತಸ ಮನೆ ಮಾಡಿದೆ.
84 ಅಡಿ ಸಾಮರ್ಥ್ಯವಿರುವ ಜಲಾಶಯದ ಇಂದಿನ ನೀರಿನ ಮಟ್ಟ 66.27 ಅಡಿಗಳಾಗಿದೆ. ನಿನ್ನೆ ಒಂದೇ ದಿನ 1.5 ಅಡಿಗಳು ಹೆಚ್ಚಳವಾಗಿದ್ದು, ಜಲಾಶಯದಿಂದ 1000 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ.
ಮುಂಗಾರು ಮಳೆ ಹೀಗೇಯೇ ಮುಂದುವರಿದರೆ ಜಲಾಶಯ ಇನ್ನು 8 ದಿನಗಳ ಒಳಗಾಗಿ ಸಂಪೂರ್ಣ ಭರ್ತಿಯಾಗಲಿದೆ ಎನ್ನಲಾಗಿದ್ದು, ಯಾವುದೇ ಕ್ಷಣಗಳಲ್ಲಾದರೂ ಡ್ಯಾಂನಿಂದ ಕಪಿಲಾ ನದಿಗೆ ನೀರನ್ನು ಬಿಡುಗಡೆ ಮಾಡಲಾಗುತ್ತದೆ.
ಜಲಾಶಯದಿಂದ ಹೆಚ್ಚಿನ ನೀರನ್ನು ಬಿಡುಗಡೆ ಮಾಡುವುದರಿಂದ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳು ಜಲಾವೃತವಾಗಲಿವೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಬದುಕು ಬದಲಿಸಿದ ಪತಿ ವಿನೋದ್ ಬಾಬುರ ಸಲಹೆ ಬೆಂಗಳೂರಿನ ಬಿ. ವಿ. ಜಾನ್ಸಿಯವರ ಬಾಲ್ಯ ಬಹುಕಷ್ಟದಲ್ಲಿ ಬನ್ನೇರುಘಟ್ಟದಲ್ಲಿ ಕಳೆದು ಹೋಗಿತ್ತು.…
ನಂಜನಗೂಡು : ಮುಜರಾಯಿ ಇಲಾಖೆ ಅದೀನದಲ್ಲಿರುವ ಸುಬ್ರಹ್ಮಣ್ಯದಲ್ಲಿ 1 ಬಕೆಟ್ ನೀರಿಗೆ 5 ರೂ. ಆದರೆ, ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ…
ಎಚ್. ಡಿ. ಕೋಟೆ : ರೈತರು ತಮ್ಮ ಜಮೀನುಗಳಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಲು ಮಾರಾಟದ ಅಂಗಡಿಗಳಲ್ಲಿ ಬಿತ್ತನೆ ಬೀಜ…
ಮೈಸೂರು : ನಗರದ ಜನ ವಸತಿ ಹಾಗೂ ಕೈಗಾರಿಕಾ ಪ್ರದೇಶವಾಗಿರುವ ಮೇಟಗಳ್ಳಿ ಬಡಾವಣೆಯು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಾವು-ಚೇಳುಗಳ ಆವಾಸ ಸ್ಥಾನವಾಗಿ…
ಕೊಡಗಿನ ದಟ್ಟಾರಣ್ಯದಲ್ಲಿ ನಾಪತ್ತೆಯಾಗಿದ್ದ ಜೆ.ಎಸ್.ಶರಣ್ಯ ಅವರ ಮನದಾಳದ ಮಾತು ಪ್ರಶ್ನೆ : ನೀವು ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಕಾಡಿಗೆ ಹೋಗಿದ್ದು,…
ವಾಷಿಂಗ್ಟನ್ : ಇವತ್ತಿನ ರಾತ್ರಿ ಇರಾನ್‌ನ ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಬೆದರಿಕೆ ಒಡ್ಡಿದ ಕೆಲವೇ ಹೊತ್ತಲ್ಲಿ ಅಮೆರಿಕ ಅಧ್ಯಕ್ಷ…