ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ.
ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, ಇಂದಿನ ಒಳಹರಿವು 11,269 ಕ್ಯೂಸೆಕ್ಸ್‌ಗಳಿಗೆ ಏರಿಕೆಯಾಗಿದೆ. ಜಲಾಶಯಕ್ಕೆ ಒಳಹರಿವು ಹೆಚ್ಚಾದಂತೆ ಹೊರಹರಿವನ್ನು ಕೂಡ ಹೆಚ್ಚು ಮಾಡಲಾಗಿದ್ದು, ಇಂದಿನ ಹೊರಹರಿವನ್ನು 1542 ಕ್ಯೂಸೆಕ್ಸ್‌ಗಳಿಗೆ ಏರಿಕೆ ಮಾಡಲಾಗಿದೆ. 84 ಅಡಿ ಗರಿಷ್ಠ ನೀರಿನ ಮಟ್ಟ ಹೊಂದಿರುವ ಜಲಾಶಯದ ಈಗಿನ ನೀರಿನ ಮಟ್ಟ 70 ಅಡಿಗಳಿಗೆ ಏರಿಕೆಯಾಗಿದೆ.
ಮಳೆ ಹೀಗೆಯೇ ಮುಂದುವರಿದರೆ ಜಲಾಶಯ ಇನ್ನು ಕೆಲವೇ ದಿನಗಳಲ್ಲಿ ಭರ್ತಿಯಾಗಲಿದ್ದು, ಜಲಾಶಯದಿಂದ ಯಾವುದೇ ಕ್ಷಣದಲ್ಲಾದರೂ ಕಪಿನಾ ನದಿಗೆ ನೀರನ್ನು ಬಿಡಲಾಗುತ್ತದೆ. ಹೀಗಾಗಿ ಕಪಿಲಾ ನದಿ ಪಾತ್ರದಲ್ಲಿರುವ ಜನರು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಇನ್ನೂ ಕಬಿನಿ ಜಲಾಶಯ ಭರ್ತಿಯತ್ತ ಸಾಗುತ್ತಿರುವುದರಿಂದ ರೈತರ ಮೊಗದಲ್ಲಿ ಸಂತಸ ಮನೆ ಮಾಡಿದ್ದು, ಈ ಬಾರಿಯೂ ನಾಲೆಗಳ ನೀರನ್ನು ನಂಬಿ ಉತ್ತಮ ಬೆಳೆ ಬೆಳೆಯಬಹುದು ಎಂದು ಅಂದಾಜಿಸಿದ್ದಾರೆ. ಕಬಿನಿ ಎಡದಂಡೆ ಹಾಗೂ ಬಲದಂಡೆ ನಾಲೆಗಳ ಮೂಲಕ ರೈತರು ಭತ್ತ ಬೆಳೆಯುವಲ್ಲಿ ಉತ್ಸುಕರಾಗಿದ್ದು, ಜಲಾಶಯ ಭರ್ತಿಯಾಗುವುದನ್ನೇ ಎದುರು ನೋಡುತ್ತಿದ್ದಾರೆ ಎನ್ನಲಾಗಿದೆ.
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…