ಹುಣಸೂರು: ಕಳೆದ ಒಂದು ವಾರದಿಂದ ಬೀಳುತ್ತಿರುವ ಜಡಿ ಮಳೆಯಿಂದಾಗಿ ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿಯುತ್ತಿದೆ.
ಹನಗೋಡು ಅಣೆಕಟ್ಟಿನ ಮೇಲೆ 5 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಮನೋಹರ ದೃಶ್ಯ ನೋಡಲು ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ.
ಇನ್ನು ನೀರಿನ ಹರಿವಿನ ವೈಭವವನ್ನು ಜನರು ಕಣ್ತುಂಬಿಕೊಳ್ಳುತ್ತಿದ್ದು, ಅಣೆಕಟ್ಟಿನಿಂದ ಮುಖ್ಯ ಕಾಲುವೆಗೆ 400 ಕ್ಯೂಸೆಕ್ಸ್ ನೀರು ಬಿಡಲಾಗಿದೆ.
ಈಗ ಅಣೆಕಟ್ಟೆಯ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದ್ದು, ಮಳೆ ಹೀಗೆಯೇ ಮುಂದುವರಿದರೆ ನದಿಯಲ್ಲಿ ಪ್ರವಾಹ ಹೆಚ್ಚಾಗಲಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಇನ್ನೂ ಹುಣಸೂರು ತಾಲ್ಲೂಕಿನಲ್ಲೂ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಯ ಮೇಲೆಯೇ ಮಳೆಯ ನೀರು ನದಿಯಂತೆ ಹರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.